Cnewstv.in / 08.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ವಸತಿ ರಹಿತ ಅಲೆಮಾರಿ/ಅರೆಅಲೆಮಾರಿ ಸಮೂದಾಯದವರಿಂದ ಅರ್ಜಿ ಆಹ್ವಾನ.
ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು 2021-22ನೇ ಸಾಲಿಗೆ ಪ.ಪಂ.ದ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ, ದೌರ್ಜನ್ಯ ಸಂತ್ರಸ್ತರಿಗೆ, ಮಾಜ ದೇವದಾಸಿಯರಿಗೆ, ಅಂತರ್ಜಾತಿ ವಿವಾಹಿತ ದಂಪತಿಗಳಿಗೆ, ವಿಧವೆಯರು/ ಒಚಿಟಿ ಮಹಿಳೆಯರು, ಮೀನುಗಾರರಿಗೆ ವಸತಿ ರಹಿತ ನಿವೇಶನ (ಸೈಟ್) ಹೊಂದಿರುವ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿ ಕೊಡಲು ವಸತಿ ನಿರ್ಮಾಣ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಿದೆ.
ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಕ್ಕೆ ಸೇರಿದ ಕಳೆದ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, 18 ವರ್ಷ ಮೇಲ್ಪಟ್ಟವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದವರಿಗೆ ರೂ. 98000/- ಹಾಗೂ ನಗರ ಪ್ರದೇಶದವರಿಗೆ ರೂ. 1.20 ಲಕ್ಷದ ಮಿತಿಯೊಳಗಿರಬೇಕು. ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ/ಅರೆಸರ್ಕಾರಿ ಸಂಸ್ಥೆಯಲ್ಲಿ ನೌಕರರಾಗಿರಬಾರದು.
ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಇಲಾಖೆಯ ವೆಬ್‍ಸೈಟ್ www.karnataka.gov.in/kmvstdcl ರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ/ಆಧಾರ್ ಕಾರ್ಡ್/ಓಟರ್ ಐಡಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ನಿರಾಪೇಕ್ಷಣಾ ಪತ್ರ, ಖಾತೆ, ಸೈಟ್/ನಿವೇಶನಕ್ಕೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಆನ್‍ಲೈನ್ ಅರ್ಜಿಯನ್ನು ದೀ; 28/02/2022 ರೊಳಗಾಗಿ ಹಾಗೂ ಆಪ್‍ಲೈನ್ ಅರ್ಜಿಯನ್ನು ದಿ: 25/02/2022 ರೊಳಗಾಗಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ ಅಥವಾ ದೂ.ಸಂ.: 08182-276776 ನ್ನು ಸಂಪರ್ಕಿಸುವುದು.
ಇದನ್ನು ಒದಿ : https://cnewstv.in/?p=8280
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv