Cnewstv.in / 08.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಸಂಘರ್ಷಕ್ಕೆ ತಿರುಗಿದ ಹಿಜಾಬ್ – ಕೇಸರಿ ಶಾಲು ವಿವಾದ : ಕಾಲೇಜು ಆವರಣದಲ್ಲಿ ಕಲ್ಲುತೂರಾಟ. ಲಘು ಲಾಠಿ ಚಾರ್ಜ್
ಶಿವಮೊಗ್ಗ : ರಾಜ್ಯಾದ್ಯಂತ ಹಿಜಾಬ್ – ಕೇಸರಿ ಶಾಲು ವಿವಾದ ತಾರಕಕ್ಕೇರಿದೆ. ಇಂದು ಬೆಳಗ್ಗೆ ಶಿವಮೊಗ್ಗದ ಬಾಪೂಜಿನಗರ ಕಾಲೇಜಿನಲ್ಲಿ ಹಿಜಾಬ್ – ಕೇಸರಿ ಶಾಲು ವಿವಾದ ಸಂಘರ್ಷಕ್ಕೆ ತಿರುಗಿದೆ.
ಇಂದು ಬೆಳಗ್ಗೆ ಬಾಪೂಜಿನಗರದ ಸರ್ಕಾರಿ ಕಾಲೇಜಿನ ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಸಂಘರ್ಷವಾಗಿದೆ. ಯಾರೋ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದಾರೆ. ಪರಿಣಾಮವಾಗಿ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಯೊಬ್ಬನಿಗೆ ಗಾಯವಾಗಿದೆ.
ತಕ್ಷಣವೇ ಪೊಲೀಸರು ಕಲ್ಲು ತೂರಿದವರನ್ನು ವಶಕ್ಕೆ ಪಡೆದಿದ್ದಾರೆ. ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಕಲ್ಲುತೂರಾಟ ಹಿನ್ನೆಲೆಯಲ್ಲಿ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದು, ಲಘು ಲಾಠಿ ಚಾರ್ಜ್ ಮಾಡಿದ್ದಾರೆ. ಕಾಲೇಜಿಗೆ ಶಿವಮೊಗ್ಗ ಜಿಲ್ಲಾ ಎಸ್.ಪಿ ಲಕ್ಷ್ಮಿ ಪ್ರಸಾದ ಆಗಮಿಸಿದ್ದಾರೆ. ಮುಂಜಾಗೃತಾ ಕ್ರಮವಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಇದನ್ನು ಒದಿ : https://cnewstv.in/?p=8283
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments