Cnewstv.in / 08.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಬಸ್ ಮೇಲೆ ಕಲ್ಲು ತೂರಾಟ ನಡೆಸಿದ ವಿದ್ಯಾರ್ಥಿಗಳು
ಶಿವಮೊಗ್ಗ : ಶಿಕಾರಿಪುರದಲ್ಲಿ ಖಾಸಗಿ ಬಸ್ ಮೇಲೆ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.
ಹಿಜಾಬ್ – ಕೇಸರಿ ಶಾಲು ಸಂಘರ್ಷ ತಾರಕಕ್ಕೇರಿದ್ದು ಇಂದು ಬೆಳಗ್ಗೆ ಶಿವಮೊಗ್ಗದ ಬಾಪೂಜಿನಗರ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕಲ್ಲುತೂರಾಟ ವನ್ನು ನಡೆಸಿದ್ದರು.
ಇದೇ ಬೆನ್ನಲ್ಲೇ ಶಿಕಾರಿಪುರದ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಕಾಲೇಜಿನ ಮುಂಭಾಗ ಹೋಗುತ್ತಿದ್ದ ಖಾಸಗಿ ಬಸ್ಸಿನ ಮೇಲೆ ವಿದ್ಯಾರ್ಥಿಗಳ ಗುಂಪೊಂದು ಕಲ್ಲುತೂರಾಟ ವನ್ನು ನಡೆಸಿದೆ.
ತಕ್ಷಣವೇ ವಿದ್ಯಾರ್ಥಿಗಳ ಗುಂಪನ್ನು ಚದುರಿಸಲು ಪೊಲೀಸರು ಸಾಹಸವನ್ನ ಪಟ್ಟಿದ್ದಾರೆ. ಬಸ್ಸಿನಲ್ಲಿದ್ದ ಜನರು ಗಾಬರಿ ಒಳಗಾಗಿದ್ದಾರೆ. ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.
ಇದನ್ನು ಒದಿ : https://cnewstv.in/?p=8285
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments