Cnewstv.in / 08.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹಿಜಾಬ್ – ಕೇಸರಿ ಶಾಲು ವಿವಾದ : ಕೆಲವರು ಪರಿಸ್ಥಿತಿಯ ದುರ್ಲಾಭ ಪಡೆಯಲು ಮುಂದಾಗಿದ್ದಾರೆ.
ಶಿವಮೊಗ್ಗ : ಜಿಲ್ಲೆಯಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಕೆಲವರು ಪರಿಸ್ಥಿತಿಯ ದುರ್ಲಾಭ ಪಡೆಯಲು ಮುಂದಾಗಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಇಬ್ಬರು ತಲ್ವಾರ್ ಹಿಡಿದುಕೊಂಡು ಸ್ಥಳಕ್ಕೆ ಬಂದಿದ್ದರು ಎಂದರೆ ಇದರ ಹಿಂದೆ ದೊಡ್ಡ ಷಡ್ಯಂತ್ರವೇ ಇದೆ ಎಂದು ಅನುಮಾನ ವ್ಯಕ್ತಪಡಿಸಿದರು. ಸರ್ಕಾರದ ನಿಯಮಗಳನ್ನು ಪಾಲನೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ಯಾರು ಕೂಡ ಇದನ್ನು ಉಲ್ಲಂಘನೆ ಮಾಡಬಾರದು. ಇಷ್ಟು ದೊಡ್ಡ ಮಟ್ಟದಲ್ಲಿ ರಾದ್ದಾಂತ ಸೃಷ್ಟಿಯಾಗಿದೆ ಎಂದರೆ, ಇದರ ಹಿಂದೆ ಕಾಣದ ಕೈಗಳ ಕೈವಾಡವಿದ್ದು, ಕೆಲವರು ಪರಿಸ್ಥಿತಿಯ ದುರ್ಲಾಭ ಪಡೆಯಲು ಮುಂದಾಗಿದ್ದಾರೆ ಎಂದರು.
ವಿದ್ಯಾರ್ಥಿಗಳು ಯಾವುದೇ ಸಂಘಟನೆಗಳು, ಮುಖಂಡರ ಪ್ರಚೋದನೆಗೆ ಒಳಗಾಗಬಾರದು. ಹಿಜಾಬ್ ಇಲ್ಲವೇ ಕೇಸರಿ ಧರಿಸಲು ಅವಕಾಶವಿಲ್ಲ. ಸಮವಸ್ತ್ರವನ್ನೇ ಧರಿಸಿಕೊಂಡು ಬರಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಪರ-ವಿರೋಧಕ್ಕೆ ಅವಕಾಶವಿಲ್ಲದೆ ಸುಲಲಿತವಾಗಿ ಶಿಕ್ಷಣ ಚಟುವಟಿಕೆಗಳು ನಡೆಯಬೇಕು. ಅಲ್ಲಿ ಜಾತಿ, ಧರ್ಮ, ಹಿಜಾಬ್, ಕೇಸರಿ ಯಾವುದಕ್ಕೂ ಅವಕಾಶವಿರುವುದಿಲ್ಲ. ಆಯಾ ಶಾಲಾಕಾಲೇಜುಗಳು ಆಡಳಿತ ಮಂಡಳಿ ನಿಗದಿಪಡಿಸಿದ ಸಮವಸ್ತ್ರವನ್ನೇ ಧರಿಸಬೇಕೆಂದು ಸೂಚಿಸಿದರು.
ಇದನ್ನು ಒದಿ : https://cnewstv.in/?p=8291
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv