Cnewstv.in / 08.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹಿಜಾಬ್ – ಕೇಸರಿ ಶಾಲು ವಿವಾದ : ರಾಜ್ಯಾದ್ಯಂತ ನಾಳೆಯಿಂದ ಮೂರು ದಿನ ಹೈಸ್ಕೂಲ್, ಕಾಲೇಜ್ ಗಳಿಗೆ ರಜೆ.
ಬೆಂಗಳೂರು: ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ರಾಜ್ಯಾದ್ಯಂತ ವ್ಯಾಪಿಸಿದ್ದು, ಹಲವು ಕಡೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರ ನಾಳೆಯಿಂದ ಮೂರು ದಿನ ಹೈಸ್ಕೂಲ್ ಹಾಗೂ ಕಾಲೇಜ್ ಗಳಿಗೆ ರಜೆ ಘೋಷಿಸಿದೆ.
ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ನಾನು ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಾಲಾ-ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಕರ್ನಾಟಕದ ಜನತೆಗೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಕಾಲ ಎಲ್ಲಾ ಪ್ರೌಢಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ನೀಡಲು ನಾನು ಆದೇಶಿಸಿದ್ದೇನೆ. ಸಂಬಂಧಪಟ್ಟವರೆಲ್ಲರೂ ಸಹಕರಿಸಬೇಕಾಗಿ ವಿನಂತಿ ಎಂದು ಮುಖ್ಯಮಂತ್ರಿ ಬವಸರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.
ಇದನ್ನು ಒದಿ : https://cnewstv.in/?p=8299
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv