Cnewstv.in / 09.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಶಿವಮೊಗ್ಗ ನಗರದ ಪ್ರಮುಖ ರಸ್ತೆಯಲ್ಲಿ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್..
ಶಿವಮೊಗ್ಗ : ನಗರದಲ್ಲಿ ನೆನ್ನೆ ಕಾಲೇಜಿನಲ್ಲಿ ಹಾಗೂ ವಿವಿಧೆಡೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ, ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ಬೆಳಗ್ಗೆ ಪೊಲೀಸ್ ಇಲಾಖಾ ವತಿಯಿಂದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು, ಡಿಎಆರ್ ತುಕಡಿ, ಕೆಎಸ್ಆರ್.ಪಿ ತುಕಡಿಯೊಂದಿಗೆ ರೂಟ್ ಮಾರ್ಚ್ ನಡೆಸಿದರು.
ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್ ಮೂಲಕ ಕಿಡಿಗೇಡಿಗಳಿಗೆ ಎಚ್ಚರಿಸುವ ಹಾಗೂ ನಾಗರೀಕರಲ್ಲಿ ಆತ್ಮವಿಶ್ವಾಸ ತುಂಬುವ ಕಾರ್ಯ ನಡೆಸಿತು. ಸೈನ್ಸ್ ಮೈದಾನದಿಂದ ಆರಂಭವಾದ ರೂಟ್ ಮಾರ್ಚ್
ಕರ್ನಾಟಕ ಸಂಘ, ಎಎ ಸರ್ಕಲ್, ಬಿ.ಹೆಚ್ ರಸ್ತೆ ಅಶೋಕ ಸರ್ಕಲ್ ಮುಖಾಂತರ ಡಿಎಆರ್ ಪೊಲೀಸ್ ಮೈದಾನದಲ್ಲಿ ಮುಕ್ತಾಯವಾಯಿತು.
ಜಿಲ್ಲಾ ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯಲ್ಲಿ ಸಜ್ಜಾಗಿದೆ. ನಾಗರೀಕರು ಯಾವುದೇ ಗಾಳಿಸುದ್ದಿಗಳಿಗೆ ಮತ್ತು ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಸಾರ್ವಜನಿಕರಲ್ಲಿ ಪೊಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಇದನ್ನು ಒದಿ : https://cnewstv.in/?p=8317
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv