Breaking News

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ..

Cnewstv.in / 09.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ..

ಶಿವಮೊಗ್ಗ : ಸಮಾಜ ಕಲ್ಯಾಣ ಇಲಾಖೆಯು 2021-22ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿಗಳಿಗೆ ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆ ನಡೆಸಲು ಶೇ. 4% ಬಡ್ಡಿ ಸಹಾಯಧನಕ್ಕಾಗಿ ಅರ್ಹ ಉದ್ಯಮಿಗಳಿಂದ ಅರ್ಜಿ ಆಹ್ವಾನಿಸಿದೆ.

ಜಿಲ್ಲೆಯ ಪ.ಜಾ/ಪ.ಪಂ.ದ ಉದ್ಯಮಿಗಳು ರಾಷ್ಟ್ರೀಕೃತ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್‍ಗಳಿಂದ ಪಡೆದ ಸಾಲಗಳಿಗೆ ಬಡ್ಡಿ ಸಹಾಯಧನ ಯೋಜನೆಯಲ್ಲಿ ಹಾಲಿ ಜಾರಿಯಲ್ಲಿರುವ ಶೇ.4% ರಷ್ಟು ಬಡ್ಡಿ ಸಹಾಯಧನವನ್ನು ಮಳಿಗೆ, ಡೀಲರ್‍ಶಿಪ್, ಪ್ರಾಂಚೈಸಿ ಮತ್ತು ಹೊಟೇಲ್ ಉದ್ಯಮಗಳನ್ನು ಪ್ರಾರಂಭಿಸಲು ವಿಸ್ತರಿಸಿ ಈ ಯೋಜನೆಯಡಿ ಗರಿಷ್ಠ ಒಂದು ಕೋಟಿ ರೂ.ಗಳವರೆಗೆ ಶೆಡ್ಯೂಲ್ಡ್ ಬ್ಯಾಂಕ್‍ಗಳಿಂದ ಸಾಲ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಆಸಕ್ತರು ಇಲಾಖೆಯ ವೆಬ್‍ಸೈಟ್ www.sw.kar.nic.in ಕ್ಕೆ ಭೇಟಿ ನೀಡಿ ಅರ್ಜಿ ಪಡೆಯಬಹುದಾಗಿದ್ದು, ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೃಥ್ವಿ ಮ್ಯಾನ್ಷನ್, ವಿನೋಬನಗರ, 100 ಅಡಿರಸ್ತೆ, ಶಿವಮೊಗ್ಗ. ದೂ.ಸಂ.: 08182-249241 ನ್ನು ಸಂಪರ್ಕಿಸುವುದು.

ಇದನ್ನು ಒದಿ : https://cnewstv.in/?p=8323

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*