Cnewstv.in / 10.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕನ್ನಡ ಪ್ರವೇಶ ಪರೀಕ್ಷೆ ಮುಂದೂಡಿಕೆ..
ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ 2021-22ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳನ್ನು ಕೋವಿಡ್-19ರ ಮಾರ್ಗಸೂಚಿಯಂತೆ ಅನಿರ್ಧಿಷ್ಟ ಕಾಲಾವಧಿವರೆಗೂ ಮುಂದೂಡಲಾಗಿದ್ದು, ಪ್ರಸ್ತುತ ಸಾಲಿನ ಸಾಹಿತ್ಯ ಪರೀಕ್ಷೆಗಳನ್ನು 2022ನೇ ಫೆಬ್ರವರಿ 18,19 ಮತ್ತು 20 ರಂದು ರಾಜ್ಯದ 19 ಕೇಂದ್ರಗಳಲ್ಲಿ ನಡೆಸಲು ತೀರ್ಮಾನಿಸಿದೆ.
ಈಗಾಗಲೇ ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಬದಲಾದ ಪರೀಕ್ಷಾ ವೇಳಾಪಟ್ಟಿಯನ್ನು ಅಂಚೆ ಮೂಲಕ ಕಳುಹಿಸಲಾಗಿದೆ. ದಿನಾಂಕ: 10/02/2022ರ ನಂತರವೂ ವೇಳಾಪಟ್ಟಿ ತಲುಪದಿರುವ ಬಗ್ಗೆ ವಿದ್ಯಾರ್ಥಿಗಳು ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್, ಚಾಮರಾಜಪೇಟೆ, ಬೆಂಗಳೂರು – 18, ಇವರನ್ನು ಸಂಪರ್ಕಿಸುವಂತೆ ಪರಿಷತ್ ಗೌರವ ಕಾರ್ಯದರ್ಶಿ ನೇ.ಭ. ರಾಮಲಿಂಗಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-26623584/26612991 ಹಾಗೂ ವೆಬ್‍ಸೈಟ್ www.kasapa.in ನ್ನು ಸಂಪರ್ಕಿಸುವುದು.
ಇದನ್ನು ಒದಿ : https://cnewstv.in/?p=8334
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments