Cnewstv.in / 11.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹಿಜಾಬ್ – ಕೇಸರಿ ಶಾಲು ವಿವಾದ : ಲಿಖಿತ ಮಧ್ಯಂತರ ಆದೇಶ ಹೊರಡಿಸಿದ ಹೈಕೋರ್ಟ್.
ಬೆಂಗಳೂರು : ಹಿಜಾಬ್ – ಕೇಸರಿ ಶಾಲು ವಿವಾದಕ್ಕೆ ಸಂಬಂಧಪಟ್ಟಂತೆ ನಿನ್ನೆ ಮೌಖಿಕ ಮಧ್ಯಂತರ ಆದೇಶ ನೀಡಿದ್ದ ಹೈಕೋರ್ಟ್ ಇಂದು ಮಧ್ಯಂತರ ಆದೇಶವನ್ನು ಪ್ರಕಟಿಸಿದೆ.
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪೋಷಕರು ಸಲ್ಲಿಸಿದ್ದ ಪ್ರತ್ಯೇಕ ರಿಟ್ ಅರ್ಜಿಗಳನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ನಿನ್ನೆ ವಿಚಾರಣೆ ನಡೆಸಿತ್ತು. ಇದಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಂತರ ಆದೇಶ ಹೊರಡಿಸುವುದಾಗಿ ತಿಳಿಸಲಾಗಿತ್ತು ಆದರೆ ಲಿಖಿತ ಆದೇಶ ನೀಡಿರಲಿಲ್ಲ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಲಿಖಿತ ಮಧ್ಯಂತರ ಆದೇಶ ಹೊರಡಿಸಿದೆ.
ನಮ್ಮದು ನಾಗರಿಕ ಸಮಾಜ. ಧರ್ಮ, ಸಂಸ್ಕೃತಿ ಹೆಸರಲ್ಲಿ ಶಾಂತಿ, ಸಾಮರಸ್ಯಕ್ಕೆ ಧಕ್ಕೆ ಸರಿಯಲ್ಲ. ಯಾವುದೇ ವ್ಯಕ್ತಿ ಇಂತಹ ಕೃತ್ಯ ನಡೆಸಲು ಅವಕಾಶವಿಲ್ಲ. ತಡೆಯಿರದ ಪ್ರತಿಭಟನೆಗಳಿಂದ ಶಾಲೆ ಕಾಲೇಜುಗಳು ಬಂದ್ ಆಗಬಾರದು.
ಶಿಕ್ಷಣ ಸಂಸ್ಥೆಗಳು ಅನಿರ್ದಿಷ್ಟ ಕಾಲ ಬಂದ್ ಆಗುವುದು ಸಂತಸದ ಸಂಗತಿಯಲ್ಲ.
ಈ ಪ್ರಕರಣವನ್ನು ತುರ್ತು ಆಧಾರದ ಮೇಲೆ ನಡೆಸಲಾಗುತ್ತಿದೆ. ರಜೆಗಳ ವಿಸ್ತರಣೆಯು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ಹಾನಿಕಾರಕವಾಗಿದೆ. ಹೀಗಾಗಿ, ಸಾರ್ವಜನಿಕರು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುತ್ತಾರೆ ಎಂದು ನಾವು ಭಾವಿಸುತ್ತೇವೆ ಮತ್ತು ನಂಬುತ್ತೇವೆ ಎಂದು ಹೈಕೋರ್ಟ್ ಹೇಳಿದೆ.
ತರಗತಿಗಳಲ್ಲಿ ಹಿಜಾಬ್ ಧರಿಸುವುದು ಇಸ್ಲಾಂ ನ ಅಗತ್ಯ ಧಾರ್ಮಿಕ ಆಚರಣೆಯೇ? ಇದು ಸಂವಿಧಾನದ ವ್ಯಾಪ್ತಿಯಲ್ಲಿ ಬರುವುದೇ? ಈ ಬಗ್ಗೆ ಆಳವಾಗಿ ಪರಿಶೀಲನೆ ನಡೆಸಬೇಕಿದೆ. ಈ ನಾಗರಿಕ ಸಮಾಜದಲ್ಲಿ ಧರ್ಮ, ಸಂಸ್ಕೃತಿ ಹೆಸರಿನಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರುವ ಕೆಲಸ ಮಾಡಬಾರದು. ಈ ವಿಚಾರಗಳಿಂದ ಶೈಕ್ಷಣಿಕ ಸಂಸ್ಥೆಗಳು ಮುಚ್ಚಿರುವುದು ಖುಷಿಯ ವಿಚಾರವಲ್ಲ. ಈ ಪ್ರಕರಣವನ್ನು ತುರ್ತಾಗಿ ಪರಿಗಣಿಸಿ ವಿಚಾರಣೆ ನಡೆಸಲಾಗುವುದು ಎಂದು ಉಚ್ಛ ನ್ಯಾಯಾಲಯ ಸೂಚಿಸಿದೆ.
ಇದನ್ನು ಒದಿ : https://cnewstv.in/?p=8361
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv