Breaking News

ಗಂಗಾಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನ

Cnewstv.in / 11.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಗಂಗಾಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನ..

ಶಿವಮೊಗ್ಗ : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವು 2021-22ನೇ ಸಾಲಿಗೆ ಪ್ರವರ್ಗ-1 ರಲ್ಲಿ ಬರುವ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಇದರ ಉಪಜಾತಿಗಳಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಗಂಗಾಕಲ್ಯಾಣ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಿದೆ.

ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಹಾಗೂ ಅತಿ ಸಣ್ಣ ರೈತರಾಗಿದ್ದು, ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದವರಿಗೆ ರೂ. 98,000/- ಮಿತಿಯೊಳಗಿರಬೇಕು.

ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ನಿಗಮದ ಕಚೇರಿಯಿಂದ ಅಥವಾ ಆಯಾ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಥವಾ ನಿಗಮದ ವೆಬ್‍ಸೈಟ್ www.ambigaradevelopment.karnataka.gov.in ರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿ: 10/03/2022 ರೊಳಗಾಗಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ ಅಥವಾ ದೂ.ಸಂ.: 08182-229634 ನ್ನು ಸಂಪರ್ಕಿಸುವುದು.

ಇದನ್ನು ಒದಿ : https://cnewstv.in/?p=8367

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*