Cnewstv.in / 11.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಶಿಕಾರಿಪುರ : ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮ ಯೋಜನೆಗೆ ಶಿಕಾರಿಪುರದ 8 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು (ವಿ.ಆರ್.ಡಬ್ಲ್ಯೂ) ಗೌರವಧನ ಆಧಾರದ ಮೇರೆಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಲು ಸ್ಥಳೀಯ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿಕಾರಿಪುರ ತಾಲೂಕಿನ ಹಾರೋಗೊಪ್ಪ, ತರಲಘಟ್ಟ, ಕಲ್ಮನೆ, ಬಳ್ಳಿಗಾವಿ, ಬಗನಕಟ್ಟೆ, ಮುದ್ದನಹಳ್ಳಿ, ಮುಡುಬಸಿದ್ದಾಪುರ ಮತ್ತು ಹೋತನಕಟ್ಟೆ ಗ್ರಾಮ ಪಂಚಾಯತಿಗಳಲ್ಲಿ ವಿ.ಆರ್.ಡಬ್ಲ್ಯೂ. ಹುದ್ದೆಗಳು ಖಾಲಿಯಿದ್ದು, 10ನೇ ತರಗತಿ ಉತ್ತೀರ್ಣ ಹೊಂದಿರುವ 18 ರಿಂದ 45 ವರ್ಷದೊಳಗಿನ ಸ್ಥಳೀಯ ಅರ್ಹ ವಿಕಲಚೇತನರು ನಿಗಧಿತ ನಮೂನೆ ಅರ್ಜಿಗಳನ್ನು ತಾಲೂಕು ಪಂಚಾಯಿತಿಯ ಎಂ.ಆರ್.ಡಬ್ಲ್ಯೂ ಅವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ: 28/02/2022 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಿಗಧಿತ ನಮೂನೆ ಅರ್ಜಿ ಮತ್ತು ಮಾಹಿತಿಗಾಗಿ ಹುಚ್ಚರಾಯಪ್ಪ (ಎಂ.ಅರ್.ಡಬ್ಲ್ಯೂ) ಮೊ.ಸಂ.: 9741161346ನ್ನು ಸಂಪರ್ಕಿಸುವುದು.
ಇದನ್ನು ಒದಿ : https://cnewstv.in/?p=8369
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv