Cnewstv.in / 11.02.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ರಾಜ್ಯಾದ್ಯಂತ ಪದವಿ ಕಾಲೇಜುಗಳಿಗೆ ಫೆ. 16ರ ವರೆಗೆ ರಜೆ.
ಬೆಂಗಳೂರು : ಹಿಜಾಬ್ ಮತ್ತು ಕೇಸರಿ ಶಾಲಾ ವಿವಾದಕ್ಕೆ ಸಂಬಂಧಿಸಿದಂತೆ ಫೆ. 16 ರವರೆಗೆ ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್. ಅಶ್ವಥ್ ನಾರಾಯಣ ತಿಳಿಸಿದ್ದಾರೆ.
ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಸದ್ಯ ಪ್ರಕರಣ ಹೈಕೋರ್ಟ್ ನಲ್ಲಿದೆ. ಹಾಗಾಗಿ ಮುಂಜಾಗೃತಾ ಕ್ರಮವಾಗಿ ರಜೆಯನ್ನು ವಿಸ್ತರಣೆ ಮಾಡಲಾಗಿದೆ.
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಿಗೆ ಫೆಬ್ರವರಿ 14 ರವರೆಗೆ ನೀಡಲಾಗಿದ್ದ ರಜೆಯನ್ನು ಮುಂಜಾಗೃತಾ ಕ್ರಮವಾಗಿ ಫೆಬ್ರವರಿ 16 ರವರೆಗೆ ವಿಸ್ತರಿಸಲಾಗಿದೆ.
ಇಲಾಖೆಯ ವ್ಯಾಪ್ತಿಗೆ ಬರುವಂತಹ ಎಲ್ಲಾ ವಿಶ್ವವಿದ್ಯಾನಿಲಯಗಳು, ಎಂಜಿನಿಯರಿಂಗ್ ಮತ್ತು ಡಿಪ್ಲೊಮೊ ಕಾಲೇಜು, ಸರ್ಕಾರಿ ಅನುದಾನ ಮತ್ತು ಅನುದಾನರಹಿತ ಪ್ರಥಮ ದರ್ಜೆ ಕಾಲೇಜುಗಳಿಗೆ ರಜೆಯ ಅನ್ವಯವಾಗಲಿದೆ ಹಾಗೂ ಈ ಸಮಯದಲ್ಲಿ ಆನ್ಲೈನ್ ಕ್ಲಾಸ್ ನಡೆಯಲಿದೆ.
ಆದರೆ ಈಗಾಗಲೇ ನಿಗದಿಯಾಗಿರುವಂತೆ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಪರೀಕ್ಷೆಗಳು ನಡೆಯಲಿದೆ ಎಂದು ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=8371
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv