Breaking News

ಈ ವರ್ಷಾಂತ್ಯದೊಳಗಾಗಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ – ಸಂಸದ ಬಿ.ವೈ ರಾಘವೇಂದ್ರ

Cnewstv.in / 12.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಈ ವರ್ಷಾಂತ್ಯದೊಳಗಾಗಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ – ಸಂಸದ ಬಿ.ವೈ ರಾಘವೇಂದ್ರ.

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಈ ವರ್ಷದ ಅಂತ್ಯದೊಳಗೆ ಮುಕ್ತಾಯವಾಗಲಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು

ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಗಳು ಈಗಾಗಲೇ ಬಹುತೇಕ ಪೂರ್ಣಗೊಂಡಿದ್ದು, ಮೇ ಅಥವಾ ಜುಲೈ ವೇಳೆಗೆ ವಿಮಾನ ನಿಲ್ದಾಣದ ರನ್ ವೇ ಕಾಮಗಾರಿ ಪೂರ್ಣಗೊಳ್ಳಲಿದೆ. ಇನ್ನೂ ಟರ್ಮಿನಲ್ ಕಾಮಗಾರಿ ಜುಲೈ ಹೊತ್ತಿಗೆ ಮುಕ್ತಾಯವಾಗಲಿದೆ.

ಕೇಂದ್ರ ನಾಗರಿಕ ವಿಮಾನಯಾನ ಸಚಿವರನ್ನು ಭೇಟಿಯಾಗಿ ವಿಮಾನ ನಿಲ್ದಾಣದ ಕುರಿತು ಚರ್ಚೆ ನಡೆಸಲಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ 11 ಮಾರ್ಗಗಳಲ್ಲಿ ವಿಮಾನ ಹಾರಾಟಕ್ಕೆ ಈಗಾಗಲೇ ಮನವಿ ಸಲ್ಲಿಸಲಾಗಿದೆ.‌

ವಿಮಾನ ನಿಲ್ದಾಣದ ನಿರ್ವಹಣೆಯನ್ನು ಕುರಿತು ಚರ್ಚೆ ನಡೆಯುತ್ತಿದೆ. ನಿರ್ವಹಣೆಯ ಜವಾಬ್ದಾರಿಯನ್ನ ರಾಜ್ಯಸರ್ಕಾರ ವಹಿಸಿಕೊಳ್ಳಲಿದೆಯಾ ಅಥವಾ ವಿಮಾನ ನಿಲ್ದಾನ ಪ್ರಾಧಿಕಾರ ವಹಿಸಿಕೊಳ್ಳಲಿದೆಯಾ ಎಂಬುವುದರ ಬಗ್ಗೆ ಚರ್ಚೆ ನಡೆಯುತ್ತಿದೆ.

ಇದನ್ನು ಒದಿ : https://cnewstv.in/?p=8373

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*