Cnewstv.in / 12.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದವರನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಯುವಕನ ಬಂಧನ.
ಬೆಂಗಳೂರು : 65 ಮೊಬೈಲ್‌ಗಳನ್ನು ದರೋಡೆ ಮಾಡಿದ್ದ 25 ವರ್ಷದ ಯುವಕನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಕುಂಬಳಗೋಡು ನಿವಾಸಿ ಸೈಯದ್ ಫವಾಜ್ ಬಂಧಿತ ಆರೋಪಿ.
ದ್ವಿಚಕ್ರ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಫವಾಜ್‌ನನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ತಾನು ಮೊಬೈಲ್‌ಗಳನ್ನು ದರೋಡೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದವರನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ. ಈತ ಜಯನಗರ, ಬಸವನಗುಡಿ, ಮೈಕೋ ಲೇಔಟ್, ಸಿದ್ದಾಪುರ, ಬಿಟಿಎಂ ಲೇಔಟ್ ಮತ್ತಿತರ ಪ್ರದೇಶಗಳಲ್ಲಿ ಅಪರಾಧ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=8385
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv