Breaking News

ಮಾರ್ಚ್‌ನೊಳಗೆ ಫ‌ಲಾನುಭವಿಗಳಿಗೆ ಹಕ್ಕು ಪತ್ರ ನೀಡಿ – ಸಚಿವ ಎಸ್‌.ಟಿ.ಸೋಮಶೇಖರ್‌

Cnewstv.in / 12.02.2022 / ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮಾರ್ಚ್‌ನೊಳಗೆ ಫ‌ಲಾನುಭವಿಗಳಿಗೆ ಹಕ್ಕು ಪತ್ರ ನೀಡಿ – ಸಚಿವ ಎಸ್‌.ಟಿ.ಸೋಮಶೇಖರ್‌

ಬೆಂಗಳೂರು: ಯಶವಂತಪುರ ವಿಧಾನ ಸಭಾಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಹಿಂದೆ ಹಕ್ಕುಪತ್ರಗಳಿಗೆ ಅರ್ಜಿ ಸಲ್ಲಿಸಿದರೂ ಇನ್ನೂ ಫ‌ಲಾನುಭವಿಗಳಿಗೆ ಹಕ್ಕು ಪತ್ರಗಳು ತಲುಪಿಲ್ಲ. ಆ ಹಿನ್ನೆಲೆ ಅರ್ಹ ಫಲಾನುಭವಿಗಳಿಗೆ ಮಾರ್ಚ್‌ ತಿಂಗಳೊಳಗೆ ಹಕ್ಕು ಪತ್ರ ವಿತರಣೆ ಮಾಡವಂತೆ ಸಚಿವ ಎಸ್‌.ಟಿ.ಸೋಮಶೇಖರ್‌ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇಂದು ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಪಂಗಳಲ್ಲಿ ಹಕ್ಕುಪತ್ರ ವಿತರಣೆ, ಸ್ಮಶಾನಕ್ಕೆ ಜಾಗದ ಕೊರತೆ ಸೇರಿದಂತೆ ನಾನಾ ಸಮಸ್ಯೆಗಳು ಹಾಗೂ ಅವುಗಳಿಗೆ ಪರಿಹಾರ
ಕಂಡುಕೊಳ್ಳುವ ಕುರಿತು ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.

ಯಾವುದೇ ಕಾರಣಕ್ಕೂ ಈ ಗಡುವು ಮೀರಬಾರದು. ಬಡವರಿಗಾಗಿ ಸರ್ಕಾರ ರೂಪಿಸಿದ ಕಾರ್ಯಕ್ರಮ ಇದಾಗಿದೆ. 94 ಸಿಸಿಯಡಿ ಹಕ್ಕುಪತ್ರಗಳಿಗೆ ಅಲೆದಾಡುವುದನ್ನು ತಪ್ಪಿಸಬೇಕು ಎಂದು ಸೂಚಿಸಿದರು. ಹಕ್ಕುಪತ್ರ, ಸಾಗುವಳಿ ಚೀಟಿ ಸಮರ್ಪಕವಾಗಿ ವಿತರಣೆಯಾಗಬೇಕು. 94ಸಿಸಿಯಡಿ ಹಕ್ಕುಪತ್ರ ವಿತರಣೆಗೆ ಅಲೆದಾಡುವುದನ್ನು ತಪ್ಪಿಸಿ. ಬಡವರಿಗೆ ಒಂದು, ಶ್ರೀಮಂತರಿಗೆ ಒಂದು ಮಾಡಬೇಡಿ ಎಂದು ಸಭೆಯಲ್ಲಿ ಹಾಜರಿದ್ದ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.

ಸಾಗುವಳಿ ಚೀಟಿಯಲ್ಲಿ ತಾರತಮ್ಯ ಎಸಗಲಾಗಿದೆ. ಕೆಲವರಿಗೆ ನೀಡುವುದು, ಕೆಲವರಿಗೆ ನೀಡದಿರುವುದು ಸರಿಯಲ್ಲ. ಕಿಮ್ಮತ್ತು ಕಟ್ಟಿಸಿಕೊಂಡು ಸಾಗುವಳಿ ಚೀಟಿ ಕೊಡದಿದ್ದರೆ ಹೇಗೆ
ಸರ್ಕಾರಿ ಭೂಮಿ ಮಂಜೂರು ಮಾಡುವಲ್ಲಿ ತಾರತಮ್ಯ ಮಾಡಬಾರದು ಎಂದು ಹೇಳಿದರು.

ಇದನ್ನು ಒದಿ : https://cnewstv.in/?p=8387

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*