Cnewstv.in / 14.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹಿಜಾಬ್ ವಿವಾದ : ಪರೀಕ್ಷೆ ಧಿಕ್ಕರಿಸಿದ ವಿದ್ಯಾರ್ಥಿನಿಯರು.
ಶಿವಮೊಗ್ಗ : ಹಿಜಾಬ್ ಧರಿಸಲು ಅವಕಾಶ ನೀಡದ ಕಾರಣ SSLC ಪೂರ್ವಸಿದ್ದತಾ ಪರೀಕ್ಷೆಯನ್ನೇ 13 ಜನ ವಿದ್ಯಾರ್ಥಿನಿಯರು ಬಹಿಷ್ಕರಿಸಿದ ಘಟನೆ ನಡೆದಿದೆ.
ಹಿಜಾಬ್ – ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇಂದಿನಿಂದ ಶಾಲೆಗಳು ಪುನರಾರಂಭವಾಗಿದೆ. ಆದರೆ 13 ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡದ ಕಾರಣ ಪರೀಕ್ಷೆಯನ್ನು ಧಿಕ್ಕರಿಸಿ ಮನೆಗೆ ತೆರಳಿದ್ದಾರೆ.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ
SSLC ಪೂರ್ವ ಸಿದ್ಧತಾ ಪರೀಕ್ಷೆ ನಡೆಯುತ್ತಿದ್ದು, ಈ ಪರೀಕ್ಷೆಗೆ 13 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಅದರೆ ಸಿಬ್ಬಂದಿಗಳು ಹಿಜಾಬ್ ತೆಗೆದು ಪರೀಕ್ಷೆ ಬರೆಯುವಂತೆ ಸೂಚಿಸಿದ್ದರು. ಆದರೆ ವಿದ್ಯಾರ್ಥಿಗಳು ಇದಕ್ಕೆ ಒಪ್ಪದೇ ನಾವು ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯುತ್ತೇವೆ ಎಂದು ಪಟ್ಟು ಹಿಡಿದಿದ್ದರು.
ಸಿಬ್ಬಂದಿಗಳು ವಿದ್ಯಾರ್ಥಿಗಳ ಮನವೊಲಿಸಲು ಎಷ್ಟೇ ಪ್ರಯತ್ನಿಸಿದರು ಪ್ರಯೋಜನವಾಗಿಲ್ಲ. ಕೋರ್ಟ್ ಆದೇಶವಿರುವ ಕಾರಣ ಸಿಬ್ಬಂದಿಗಳು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬಹಿಷ್ಕರಿಸಿ ಮನೆಗೆ ತೆರಳಿದರು.
ಇದನ್ನು ಒದಿ : https://cnewstv.in/?p=8414
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv