Breaking News

ಹಿಜಾಬ್ – ಕೇಸರಿ ಶಾಲು ವಿವಾದ : ಶಾಲೆಗಳು ಪುನರಾರಂಭ. ಹೇಗಿತ್ತು ವಿದ್ಯಾರ್ಥಿಗಳ ಪ್ರತಿಕ್ರಿಯೆ ??!!!

Cnewstv.in / 14.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಹಿಜಾಬ್ – ಕೇಸರಿ ಶಾಲು ವಿವಾದ : ಶಾಲೆಗಳು ಪುನರಾರಂಭ. ಹೇಗಿತ್ತು ವಿದ್ಯಾರ್ಥಿಗಳ ಪ್ರತಿಕ್ರಿಯೆ ??!!!

ಶಿವಮೊಗ್ಗ : ಹಿಜಾಬ್ – ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇಂದಿನಿಂದ ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳು ಪುನರಾರಂಭವಾಗಿದೆ.

ಶಾಲೆಗಳು ಆರಂಭವಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಹಾಗೂ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್ ರವರು ಬಿ.ಹೆಚ್. ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಭೇಟಿ ನೀಡಿದರು. ಡಿಡಿಪಿಐ ಹಾಗೂ ಶಿಕ್ಷಕರಿಂದ ಅಗತ್ಯ ಮಾಹಿತಿಗಳನ್ನು ಪಡೆದರು.

ಹೇಗಿತ್ತು ವಿದ್ಯಾರ್ಥಿಗಳ ಪ್ರತಿಕ್ರಿಯೆ ??.

ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಗಲಾಟೆ , ಭಯದ ಹಿನ್ನೆಲೆ ಬಹುತೇಕ ವಿದ್ಯಾರ್ಥಿಗಳು ಶಾಲೆಗೆ ಗೈರಾಗಿದ್ದರು. ಕೇವಲ ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳು ಮಾತ್ರ ಶಾಲೆಗೆ ಆಗಮಿಸಿದ್ದರು.

ಹಿಜಾಬ್ ಧರಿಸಿಯೇ ಕೆಲವು ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದ್ದರು. ಆದರೆ ತರಗತಿಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲದ ಕಾರಣ ಶಾಲೆಯಲ್ಲಿ ಹಿಸಾಬ್ ತೆಗೆಯಲು ಪ್ರತ್ಯೇಕ ಕೊಠಡಿಯ ವ್ಯವಸ್ಥೆಯನ್ನು ಸಹ ಮಾಡಲಾಗಿತ್ತು.

ಹಿಜಾಬ್ ಧರಿಸಿ SSLC ಪೂರ್ವ ಸಿದ್ಧತಾ ಪರೀಕ್ಷೆ ಬರೆಯಲು ಅವಕಾಶ ನೀಡದ ಕಾರಣ 13 ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬಹಿಷ್ಕರಿಸಿದ ಘಟನೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನಡೆದಿದೆ.

ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಶಾಲೆಗಳ ಸುತ್ತಮುತ್ತ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ

ಇದನ್ನು ಒದಿ : https://cnewstv.in/?p=8414

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*