Breaking News

ರಾಜ್ಯಾದ್ಯಂತ ನಾಳೆಯಿಂದ ಪಿಯು, ಡಿಗ್ರಿ ಕಾಲೇಜ್ ಆರಂಭ

Cnewstv.in / 15.02.2022 /ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬೆಂಗಳೂರು : ರಾಜ್ಯಾದ್ಯಂತ ನಾಳೆಯಿಂದ ಪಿಯುಸಿ ಹಾಗೂ ಪದವಿ ಕಾಲೇಜುಗಳು ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳೊದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಕಾಲೇಜ್ ಪುನಾರಾರಂಭ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಮುಖ್ಯಮಂತ್ರಿ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದರು.

ಶಾಲಾ ಕಾಲೇಜುಗಳ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಿದೆ. ಪೋಷಕರು ಮತ್ತು ಮಕ್ಕಳು ಆತಂಕಪಡುವ ಅಗತ್ಯವಿಲ್ಲ. ಶಾಲಾ- ಕಾಲೇಜುಗಳ ಜೊತೆಗೆ ಪೊಲೀಸ್ ಇಲಾಖೆ ಇರಲಿದೆ. ಹೈಕೋರ್ಟ್ ಮಧ್ಯಂತರ ಆದೇಶವನ್ನು ಯಾರೂ ಕೂಡಾ ಉಲ್ಲಂಘಿಸುವಂತಿಲ್ಲ. ಶಾಲಾ ಸಮವಸ್ತ್ರ ಧರಿಸಿ ಶಾಲಾ-ಕಾಲೇಜುಗಳಿಗೆ ಹಾಜರಾಗಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=8430

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*