Cnewstv.in /15.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನಮಗೆ ಪರೀಕ್ಷೆಗಿಂತ ನಮಗೆ ಧರ್ಮವೇ ಮುಖ್ಯ. ಇಂದೂ ಕೂಡ ಹಿಜಾಬ್ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿನಿಯರು.
ಶಿವಮೊಗ್ಗ : ಪ್ರೌಢಶಾಲೆಗಳು ಆರಂಭವಾಗಿ ಎರಡನೇ ದಿನವಾದ ಇಂದೂ ಕೂಡ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಶಾಲೆಗೆ ಆಗಮಿಸಿದ್ದಾರೆ.
ಹೈಕೋರ್ಟ್ ಮಧ್ಯಂತರ ಆದೇಶ ಹಿನ್ನೆಲೆಯಲ್ಲಿ ನಿನ್ನೆಯಿಂದ ಪ್ರೌಢ ಶಾಲೆಗಳು ಆರಂಭವಾಗಿದೆ. ಶಾಲಾ – ಕಾಲೇಜುಗಳಿಗೆ ಧರ್ಮವನ್ನು ಪ್ರತಿಬಿಂಬಿಸುವಂತಹ ಯಾವುದೇ ವಸ್ತುಗಳನ್ನು ಧರಿಸದೆ ತೆರಳಬೇಕು ಎಂದು ಹೈಕೋರ್ಟ್ ತ್ರಿಸದಸ್ಯ ಪೀಠ ಸೂಚನೆ ನೀಡಿತು.
SSLC ಪೂರ್ವ ಸಿದ್ಧತಾ ಪರೀಕ್ಷೆ ಯನ್ನು ನೆನ್ನೆ ಹಿಜಾಬ್ ಧರಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದ ಕಾರಣ 13 ಜನ ವಿದ್ಯಾರ್ಥಿನಿಯರು ಪರೀಕ್ಷೆಗೆ ಬಹಿಷ್ಕರಿಸಿ ತೆರಳಿದ್ದರು. ಸಿಬ್ಬಂದಿಗಳು ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸಿದರೂ ಸಹ ಸಾಧ್ಯವಾಗಲಿಲ್ಲ.
ಇಂದೂ ಕೂಡಾ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಶಾಲೆಗೆ ಆಗಮಿಸಿದ್ದಾರೆ. ನಮಗೆ ಪರೀಕ್ಷೆಗಿಂತ ನಮಗೆ ಧರ್ಮವೇ ಮುಖ್ಯ ಎಂದು ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಶಾಲೆಗೆ ಆಗಮಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಶಾಲೆಯ ಸುತ್ತಮುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇದನ್ನು ಒದಿ : https://cnewstv.in/?p=8432
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv