Cnewstv.in /15.02.2022 / ಮಾಸ್ಕೋ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ರಷ್ಯಾ-ಉಕ್ರೇನ್ ಯುದ್ಧ ಭೀತಿ : ತಾತ್ಕಾಲಿಕವಾಗಿ ಉಕ್ರೇನ್ ತೊರೆಯುವಂತೆ ಪ್ರಜೆಗಳಲ್ಲಿ ಮನವಿ ಮಾಡಿದ ಭಾರತ.
ಮಾಸ್ಕೋ : ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಲಿದೆ ಎಂದು ಉಕ್ರೇನ್ ಅಧ್ಯಕ್ಷ ವ್ಲಾದಿಮಿರ್ ಝೆಲೆನ್ ಸ್ಕಿ ಆತಂಕ ವ್ಯಕ್ತಪಡಿಸಿದ ಬೆನ್ನಲ್ಲೇ ಉಕ್ರೇನ್ ತೊರೆಯುವಂತೆ ಭಾರತ ತನ್ನ ಪ್ರಜೆಗಳಿಗೆ ಇಂದು ಮಾರ್ಗಸೂಚಿಯನ್ನು ಹೊರಡಿಸಿದೆ.
ಉಕ್ರೇನ್ ರಾಜಧಾನಿ ಕೈವ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ಹೇಳಿಕೆ ಬಿಡುಗಡೆ ಮಾಡಿದ್ದು, “ಉಕ್ರೇನ್‌ನಲ್ಲಿನ ಸದ್ಯದ ಅನಿಶ್ಚಿತತೆ ಪರಿಸ್ಥಿತಿಯ ದೃಷ್ಟಿಯಿಂದ ಭಾರತೀಯ ಪ್ರಜೆಗಳು, ನಿರ್ದಿಷ್ಟವಾಗಿ ಉಳಿಯಲು ಅನಿವಾರ್ಯವಲ್ಲದ ವಿದ್ಯಾರ್ಥಿಗಳು ತಾತ್ಕಾಲಿಕವಾಗಿ ಹೊರಡಲು ಪರಿಗಣಿಸಬಹುದು” ಎಂದು ತಿಳಿಸಿದೆ.
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅನಗತ್ಯವಾಗಿ ಉಕ್ರೇನ್ ಗೆ ಭೇಟಿ ನೀಡುವುದಾಗಲಿ ಅಥವಾ ಉಕ್ರೇನ್ ನಲ್ಲಿಯೇ ವಾಸ್ತವ್ಯ ಮುಂದುವರಿಸುವುದು ಔಚಿತ್ಯವಲ್ಲ ಎಂದು ಭಾರತ ವಿವರಿಸಿದೆ.
ಈಗಾಗಲೇ ಅನೇಕ ದೇಶಗಳು ತಮ್ಮ ಪ್ರಜೆಗಳಿಗೆ ಉಕ್ರೇನ್ ತೊರೆಯುವಂತೆ ಸೂಚನೆ ನೀಡಿದೆ. ಪ್ರಮುಖವಾಗಿ ಅಮೆರಿಕ, ಜರ್ಮನಿ, ಇಟಲಿ, ಬ್ರಿಟನ್, ನೆದರ್ಲ್ಯಾಂಡ್ಸ್, ಕೆನಡಾ, ನಾರ್ವೆ, ಎಸ್ಟೋನಿಯಾ, ಐರ್ಲೆಂಡ್, ಬೆಲ್ಜಿಯಂ, ಲಕ್ಸೆಂಬರ್ಗ್, ಲಿಥುವೇನಿಯಾ, ಬಲ್ಗೇರಿಯಾ, ಸ್ಲೊವೇನಿಯಾ, ಆಸ್ಟ್ರೇಲಿಯಾ, ಜಪಾನ್, ಇಸ್ರೇಲ್, ಸೌದಿ ಅರೇಬಿಯಾ.
ಇದನ್ನು ಒದಿ : https://cnewstv.in/?p=8441
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments