Breaking News

ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ‌.. ನಿರ್ಬಂಧಗಳು ಅನ್ವಯ..

Cnewstv.in /15.02.2022 / ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ‌.. ನಿರ್ಬಂಧಗಳು ಅನ್ವಯ..

ಶಿವಮೊಗ್ಗ : ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ. ಶಾಲಾ ಕಾಲೇಜುಗಳ ಆವರಣದಿಂದ 200 ಮೀಟರ್ ಒಳಗಡೆ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ ಎಂದು ಎಂದು ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.

ನಗರದಲ್ಲಿ ವಿವಿಧ ಏರಿಯಾಗಳಲ್ಲಿ ಗಲಾಟೆ ನಡೆಯುವ ಸಂಭವವಿರುವುದರಿಂದ ಮುಂಜಾಗೃತಾ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಭಂಗ ಉಂಟಾಗದಂತೆ ಕಾಪಾಡುವ ಹಿತದೃಷ್ಟಿಯಿಂದ ನಗರದಾದ್ಯಂತ ಪ್ರತಿಬಂಧಕಾಜ್ಙೆಯನ್ನು ಜಾರಿಗೊಳಿಸಲಾಗಿದೆ.

ಶಿವಮೊಗ್ಗ ನಗರದಾದ್ಯಂತ ಫೆಬ್ರವರಿ 16 ರ ಬೆಳಗ್ಗೆ 6 ಗಂಟೆ ಯಿಂದ, ಫೆ. 19 ರ ರಾತ್ರಿ 9 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಹಶೀಲ್ದಾರ್ ಡಾ. ನಾಗರಾಜ್ ಆದೇಶವನ್ನು ಹೊರಡಿಸಿದ್ದಾರೆ.

ಈ ನಿರ್ಬಂಧಗಳು ಅನ್ವಯ..

* ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ, ಹಿಜಾಬ್ ವಸ್ತ್ರಾಧರಣೆ ಕುರಿತು ದಾಖಲಾಗಿರುವ ಪ್ರಕರಣದಲ್ಲಿ, ಮಾನ್ಯ
ಉಚ್ಚ ನ್ಯಾಯಾಲಯವು ನೀಡಿರುವ ಮಧ್ಯಂತರ ಆದೇಶದಂತ ವಸ್ತ್ರ ಸಂಹಿತೆಯನ್ನು ಪಾಲಿಸಿ ಯಾವುದೇ ಜಾತಿ ಧರ್ಮ
ಸೂಚಕದ ವಸ್ತ್ರಗಳನ್ನು ಶಿಕ್ಷಣ ಸಂಸ್ಥೆಗಳಲ್ಲಿ ಧರಿಸುವ ಮೂಲಕ, ಪ್ರದರ್ಶಿಸುವ ಮೂಲಕ, ಶಾಲೆಯ ಶೈಕ್ಷಣಿಕ
ವಾತಾವರಣವನ್ನು ಕಲುಷಿತಗೊಳಿಸುವಂತೆ ಸನ್ನಿವೇಶಗಳನ್ನು ಸೃಷ್ಟಿಮಾಡುವುದನ್ನು ನಿಷೇಧಿಸಿದೆ.

* ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದ, ಶಿಕ್ಷಣ ಸಮಿತಿ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಇತರೆ
ಯಾವುದೇ ಸಂಘ, ಸಂಘಟಿಸುವುದು ಪ್ರಚೋದಿಸುವುದನ್ನು ನಿಷೇಧಿಸಿದೆ.

* ಶಿಕ್ಷಣ ಸಂಸ್ಥೆಗಳಲ್ಲಿ ಕೇಸರಿ ಶಾಲು, ಹಿಜಾಬ್ ಅಥವಾ ಇನ್ನು ಯಾವುದೇ ಧಾರ್ಮಿಕ ವಿಷಯಗಳ ಕುರಿತು ಅನಗತ್ಯ
‘ಚರ್ಚೆ ಹುಟ್ಟುಹಾಕಿ ಕೋಮು ಸೌರ್ಹದತೆಯನ್ನು ಹಾಳುಮಾಡತಕ್ಕದಲ್ಲ.

* ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ ಐದು (05) ಮತ್ತು ಐದಕ್ಕಿಂತ ಜನರು ಗುಂಪಾಗಿ ಸೇರುವುದನ್ನು
ನಿರ್ಬಂಧಿಸಿದೆ.

* ಯಾವುದೇ ಮೆರವಣಿಗೆ ಅಥವಾ ಸಭೆ, ಸಮಾರಂಭಗಳನ್ನು ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ
ಸಮಾವೇಶಗಳನ್ನು ನಿಷೇಧಿಸಿದೆ.

* ಶಸ್ತ್ರಗಳನ್ನು ದೊಣ್ಣೆ,ಕತ್ತಿ, ಈಟಿ,ಗದಕಲ್ಲು, ಇಟ್ಟಿಗೆ, ಚಾಕು, ಇನ್ನು ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ
ಹಿಂಸೆ ಉಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು /ಶೇಖರಿಸುವುದನ್ನು ನಿಷೇಧಿಸಿದೆ.

* ಯಾವುದೇ ಸ್ಫೋಟಕ ವಸ್ತುಗಳನ್ನು (ಪಟಾಕಿ/ಸಿಡಿಮದ್ದು) ಬಳಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು, ಎಸೆಯುವ
ಸಾಧನಗಳನ್ನು/ ಉಪಕರಣಗಳ ಒಯ್ಯುವಿಕೆ ಮತ್ತು ಶೇಖರಿಸುವುದನ್ನು ನಿಷೇಧಿಸಿದೆ.

* ಯಾವುದೇ ವ್ಯಕ್ತಿಗಳ ಅಥವಾ ಶವಗಳ ಪ್ರತಿಕೃತಿ ಪ್ರದರ್ಶನ ಮಾಡುವುದನ್ನು ಪ್ರಚೋದಿಸಬಹುದಾದಂತಹ ಬಹಿರಂಗ
ಘೋಷಣೆಗಳನ್ನು ಕೂಗುವುದು ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು
ಸಂಕೇತಗಳನ್ನು, ಭಿತ್ತಿಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು
ನಿಷೇಧಿಸಿದೆ.

* ಯಾವುದೇ ಖಾಸಗಿ/ಸಾರ್ವಜನಿಕ ಆಸ್ತಿಗಳನ್ನು ಹಾನಿಗೊಳಿಸುವ ಮತ್ತು ವಿರೂಪಗೊಳಿಸುವ ಎಲ್ಲಾ ರೀತಿಯ
ಚಟುವಟಿಕೆಗಳನ್ನು ನಿಷೇಧಿಸಿದೆ.

* ಯಾವುದೇ ವ್ಯಕ್ತಿಯ ಜಾತಿ/ಧರ್ಮ/ಕೋಮು/ಪಂಥಗಳಿಗೆ ಅಥವಾ ಸಾರ್ವಜನಿಕ ನೈಜಿಕತೆಗೆ ಬಾಧಕ ಉಂಟು
ಮಾಡಬಹುದಾದಂತಹ ಚಟುವಟಿಕೆಗಳನ್ನು ನಿಷೇಧಿಸಿದೆ.

* ಸರ್ಕಾರಿ ಸಂಸ್ಥೆಗಳು/ಸಂಘಟನೆಗಳು ಹಾಗೂ ಕಾರ್ಯನಿರತ ಅಧಿಕಾರಿ/ಸಿಬ್ಬಂದಿಗಳ ವಿರುದ್ಧ ನಿಂಧಿಸುವಂತಹ/
ಅವಹೇಳನಕಾರಿಯಾದಂತಹ ಯಾವುದೇ ಘೋಷಣೆಗಳು/ ಭಾಷಣಗಳು ಪ್ರಕಟಣೆಗಳು/ ಅವಾಚ್ಯ ಶಬ್ದಗಳ ಬಳಕೆ/
ಪ್ರಚೋದನಾಕಾರಿ ಭಾಷಣ/ಗಾಯನ ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಿದೆ.

* ಈಗಾಗಲೇ ಸರ್ಕಾರ ಕಾರ್ಯಕ್ರಮಗಳು ನಿಗಧಿಯಾಗಿದಲ್ಲಿ ಈ ಕೆಳಕಂಡ ಪ್ರಾಧಿಕಾರದ ಅನುಮತಿ ಇಲ್ಲದೆ
ಮುಂದುವರೆಯತಕ್ಕದ್ದಲ್ಲ.

ಇದನ್ನು ಒದಿ : https://cnewstv.in/?p=8461

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments