Cnewstv.in / 17.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ವಿಜ್ಞಾನ ಒಗಟು ಬಿಡಿಸುವ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.
ಶಿವಮೊಗ್ಗ : ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ(ಕೆಎಸ್‍ಸಿಎಸ್‍ಟಿ) ಬೆಂಗಳೂರು ಇವರು ರಾಷ್ಟ್ರೀಯ ವಿಜ್ಞಾನ ದಿನ 2022 ರ ಪ್ರಯುಕ್ತ 8-10 ತರಗತಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಮಕ್ಕಳಿಗಾಗಿ ವಿಜ್ಞಾನ ಕಾರ್ಯಕ್ರಮದ ‘ವಿಜ್ಞಾನ ಒಗಟು ಬಿಡಿಸುವ ಸ್ಪರ್ಧೆ’ಯಲ್ಲಿ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ಸ್ಪರ್ಧೆಯಲ್ಲಿ ಜಿಲ್ಲೆಯಿಂದ ವಿವಿಧ ಶಾಲೆಗಳ 190 ಮಕ್ಕಳು ನೋಂದಣಿ ಮಾಡಿಕೊಂಡಿದ್ದರು. ಜಿಲ್ಲಾ ಮಟ್ಟದಲ್ಲಿ ಫೆ.09 ರಂದು ನಡೆದ ಆನ್‍ಲೈನ್ ಸ್ಪರ್ಧೆಯಲ್ಲಿ 100 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು.
ಮೊದಲ ಹಂತದಲ್ಲಿ ಉತ್ತಮವಾಗಿ ಉತ್ತರಿಸಿದ ವಿದ್ಯಾರ್ಥಿಗಳಾದ ಸವಿನಯ್ ಹೆಚ್.ಎಸ್, ಜ್ಞಾನದೀಪ ಶಾಲೆ, ಜಾವಳ್ಳಿ. ಸಿದ್ದಾರ್ಥ ಗೋಡೋಲ್ಕರ್, ಜ್ಞಾನದೀಪ ಶಾಲೆ, ಜಾವಳ್ಳಿ. ಸಿಂಚನ.ಡಿ, ಪೋದಾರ್ ಇಂಟರ್‍ನ್ಯಾಷನಲ್ ಶಾಲೆ, ಶಿವಮೊಗ್ಗ ಹಾಗೂ ಖಜೀ ಮೊಹಮದ್ ಜೌಹಾರ್, ಜ್ಞಾನದೀಪ ಶಾಲೆ ಜಾವಳ್ಳಿ ಇವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಸಿಇಓ ಎಂ.ಎಲ್.ವೈಶಾಲಿ ಇವರನ್ನು ಅಭಿನಂದಿಸಿದ್ದಾರೆ.
ಇದನ್ನು ಒದಿ : https://cnewstv.in/?p=8489
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv