Cnewstv.in /17. 02.2022 / ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
New Guidelines : ಇನ್ನೂ ಮುಂದೆ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ..40 kmph ವೇಗ.. ಹೊಸ ಮಾರ್ಗಸೂಚಿಯಲ್ಲಿ
ಏನಿದೆ ??
ನವದೆಹಲಿ : ಭಾರತದಲ್ಲಿ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರಿ ಮಾಡುವ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯವಾಗಿ ಬಳಸಬೇಕು ಎಂದು ಕೇಂದ್ರ ಸರ್ಕಾರ ಅದೇಶ ನೀಡಿದೆ.
ದೇಶದಲ್ಲಿ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿದ ನಿಯಮ ಈಗಾಗಲೇ ಜಾರಿಯಲ್ಲಿದೆ. ಈ ಮಧ್ಯೆ ಇದೀಗ ಹಿಂಬದಿ ಸವಾರಿ ಮಾಡುವ ಮಕ್ಕಳಿಗೂ ಕೇಂಧ್ರ ಸರ್ಕಾರ ಹೆಲ್ಮೆಟ್ ಕಡ್ಡಾಯಗೊಳಿಸಿದೆ.
ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಕುಳಿತುಕೊಳ್ಳುವ ಮಕ್ಕಳಿಗೆ ಹೆಲ್ಮೆಟ್ ಬಳಕೆಯನ್ನು ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರವು ಈ ಹಿಂದೆ ಪ್ರಸ್ತಾಪಿಸಿತ್ತು. ಈ ವಿಷಯದ ಬಗ್ಗೆ ನಾಗರಿಕರ ಅಭಿಪ್ರಾಯವನ್ನು ಕೇಳಲು ಅಕ್ಟೋಬರ್ 2021ರಲ್ಲಿ ಕರಡು ಅಧಿಸೂಚನೆಯನ್ನು ಹೊರಡಿಸಿತ್ತು.
ಹೊಸ ನಿಯಮವನ್ನು ಉಲ್ಲಂಘನೆ ಮಾಡಿದರೆ 1,000 ರೂ. ದಂಡ ಮತ್ತು 3 ತಿಂಗಳ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲಾಗುತ್ತದೆ. ಕೇಂದ್ರ ಮೋಟಾರು ವಾಹನಗಳ ನಿಯಮಗಳ ಅಡಿಯಲ್ಲಿ 1989ರ ತಿದ್ದುಪಡಿಯ ಮೂಲಕ ಹೊಸ ನಿಯಮಗಳನ್ನು ಪ್ರಸ್ತಾಪಿಸಲಾಗಿದ್ದು, ಪ್ರಸ್ತಾವನೆಯೂ ನಾಲ್ಕು ವರ್ಷ ವಯಸ್ಸಿನ ಮಕ್ಕಳನ್ನು ಒಳಗೊಂಡಿರುತ್ತದೆ.
ಮಕ್ಕಳ ಗಾತ್ರಕ್ಕೆ ಅನುಗುಣವಾಗಿ ಹೆಲ್ಮೆಟ್‍ಗಳನ್ನು ತಯಾರಿಸುವಂತೆ ಹೆಲ್ಮೆಟ್ ತಯಾರಕರಿಗೆ ಸರ್ಕಾರ ಸೂಚಿಸಿದೆ.
ಮಗುವನ್ನು ಹೊಂದಿರುವ ಯಾವುದೇ ದ್ವಿಚಕ್ರ ವಾಹನವು ಗಂಟೆಗೆ ಗರಿಷ್ಠ 40-ಕಿಮೀ ವೇಗದ ಮಿತಿಯಲ್ಲಿ ಪ್ರಯಾಣಿಸಬೇಕಾಗುತ್ತದೆ.
ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡಡ್ರ್ಸ್(ಬಿಐಎಸ್) ಪ್ರಕಾರ, ಹೆಲ್ಮೆಟ್ ಕಡಿಮೆ ತೂಕ, ಹೊಂದಾಣಿಕೆ, ಜಲನಿರೋಧಕ ಹಾಗೂ ಬಾಳಿಕೆ ಬರುವಂತಹದ್ದಾಗಿರಬೇಕು.
ಮಕ್ಕಳ ಗಾತ್ರಕ್ಕೆ ಅನುಗುಣವಾಗಿ, ಸುರಕ್ಷತಾ ಜಾಕೆಟ್ಗಳಿಗೆ ಭುಜದ ಕುಣಿಕೆಗಳನ್ನು ರೂಪಿಸುವ ಒಂದು ಜೋಡಿ ಪಟ್ಟಿಗಳೊಂದಿಗೆ ತಯಾರಿಸಲಾಗುತ್ತದೆ.
30 ಕೆಜಿ ತೂಕವನ್ನು ಹೊರುವ ಸಾಮಥ್ರ್ಯವನ್ನು ಹೊಂದಿರಬೇಕು. ನಾಲ್ಕು ವರ್ಷದೊಳಗಿನ ಮಕ್ಕಳು ಕ್ರ್ಯಾಶ್ ಹೆಲ್ಮೆಟ್ ಅಥವಾ ಬೈಸಿಕಲ್ ಹೆಲ್ಮೆಟ್ ಅನ್ನು ಧರಿಸಬೇಕು. ಸರ್ಕಾರವು ನಿರ್ದಿಷ್ಟಪಡಿಸಿದ ಮಾನದಂಡಗಳನ್ನು ಅನುಸರಿಸಬೇಕು ಎಂದು ಸೂಚಿಸಿದೆ.
ಇದನ್ನು ಒದಿ : https://cnewstv.in/?p=8503
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments