Cnewstv.in / 18.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಜಾಗದ ವಿಚಾರವಾಗಿ ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಮೇಲೆ ಹಲ್ಲೆ.
ಶಿವಮೊಗ್ಗ : ಜಾಗದ ವಿಚಾರವಾಗಿ ಶಿವಮೊಗ್ಗ ಮಹಾನಗರ ಪಾಲಿಕೆಯ ಮಾಜಿ ಸದಸ್ಯೆ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಮಾಜಿ ಮಹಾನಗರ ಪಾಲಿಕೆ ಸದಸ್ಯ ಸೀತಾಲಕ್ಷ್ಮಿ ಮತ್ತು ಅವರ ಮಗ ಪರಶುರಾಮನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ.
ಸೀತಾಲಕ್ಷ್ಮಿಯವರು ಈಶ್ವರಪ್ಪನವರ ಕುಟುಂಬಕ್ಕೆ ಸೇರಿದ ಜಾಗದಲ್ಲಿ ಅತಿಕ್ರಮಣ ಮಾಡಿ ಮನೆ ಕಟ್ಟಿದ್ದಾರೆ ಎಂದು ಈಶ್ವರಪ್ಪನವರ ಕುಟುಂಬದವರು ಆರೋಪಿಸಿದ್ದಾರೆ.
ಅದರೆ ಸೀತಾಲಕ್ಷ್ಮಿಯವರು ಇದು ನಮಗೆ ಸೇರಿದ ಜಾಗ.
ಜಾಗದ ಸಂಪೂರ್ಣ ದಾಖಲಾತಿ ನಮ್ಮ ಹತ್ತಿರ ಇದೆ. ಆದರೂ ಸಹ ನಮ್ಮ ಮೇಲೆ ಅನವಶ್ಯಕವಾಗಿ ಕುಟುಂಬದ 5 ಜನರು ಸೇರಿ ನನ್ನ ಹಾಗೂ ನನ್ನ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದ್ದಾರೆ.
ಇಬ್ಬರೂ ಸಹ ದೂರು ಮತ್ತು ಪ್ರತಿ ದೂರುಗಳನ್ನು ನೀಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ದೊಡ್ಡ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನು ಒದಿ : https://cnewstv.in/?p=8512
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments