Cnewstv.in / 19.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಗೃಹ ಇಲಾಖೆಯಲ್ಲಿನ ಮಹಿಳೆಯರಿಗೆ ಶೇ.33 ಮೀಸಲಾತಿ : ಸುಧಾರಣಾ ಆಯೋಗ ಶಿಫಾರಸು
ಬೆಂಗಳೂರು: ಪೊಲೀಸ್ ಇಲಾಖೆಯ ಕಾನ್‌ಸ್ಟೆಬಲ್, ಸಬ್ ಇನ್‌ಸ್ಪೆಕ್ಟರ್‌ವರೆಗಿನ ಗೆಜೆಟೆಡ್ ಅಲ್ಲದ ಹುದ್ದೆಗಳ ನೇರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವಂತೆ ಸರ್ಕಾರಕ್ಕೆ ಆಡಳಿತ ಸುಧಾರಣಾ ಆಯೋಗ ಶಿಫಾರಸು ಮಾಡಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಆಯೋಗದ ಅಧ್ಯಕ್ಷ ಟಿ.ಎಂ.ವಿಜಯಭಾಸ್ಕರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕರ್ನಾಟಕದ ಆಡಳಿತ ಸುಧಾರಣಾ ಆಯೋಗ-2ರ ಎರಡು ಮತ್ತು 3ನೇ ವರದಿಯನ್ನು ಸಲ್ಲಿಸಿದರು.
ಕರ್ನಾಟಕದಲ್ಲಿ ಗೆಜೆಟೆಡ್ ಅಲ್ಲದ ಪೊಲೀಸ್ ಸಿಬ್ಬಂದಿಗಳಲ್ಲಿ ಶೇಕಡಾವಾರು ಮಹಿಳಾ ಪ್ರಾತಿನಿಧ್ಯವು 8.3% ಆಗಿದೆ (2020 ರಲ್ಲಿ). ಕಾನ್‌ಸ್ಟೆಬಲ್‌ಗಳು ಇತ್ಯಾದಿ ಹುದ್ದೆಗಳ ನೇಮಕಾತಿಯಲ್ಲಿ ಮಹಿಳೆಯರಿಗೆ 25% ಹುದ್ದೆಗಳನ್ನು ಮೀಸಲಿಡಲು ರಾಜ್ಯವು ಆದೇಶಿಸಿದೆ. ಆದರೆ ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯವು ದಿನಾಂಕ:12.05.2015 ರಂದು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೊಲೀಸ್ ಪಡೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಹೆಚ್ಚಿಸಲು ಮಹಿಳೆಯರಿಗೆ 33% ಮೀಸಲಾತಿಯನ್ನು ನೀಡಲು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸಹ ಪೊಲೀಸ್ ಪಡೆಗಳಲ್ಲಿ ಕಾನ್ಸ್‌ಟೇಬಲ್‌ನಿಂದ ಸಬ್-ಇನ್‌ಸ್ಪೆಕ್ಟರ್‌ವರೆಗಿನ ಗೆಜೆಟೆಡ್ ಅಲ್ಲದ ಹುದ್ದೆಗಳಲ್ಲಿ ನೇರ ನೇಮಕಾತಿಯಲ್ಲಿ ಮಹಿಳೆಯರಿಗೆ, ಸಮತಳವಾಗಿ ಮತ್ತು ಪ್ರತಿ ವರ್ಗದಲ್ಲಿ (ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಇತರರು) 33% ಮೀಸಲಾತಿಯನ್ನು ಅನುಮೋದಿಸಬಹುದು ಎಂದು ತಿಳಿಸಿದೆ.
ಇದನ್ನು ಒದಿ : https://cnewstv.in/?p=8544
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv