Cnewstv.in / 20.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಬೆಳ್ಳಂಬೆಳಗ್ಗೆ ಸಕಲೇಶಪುರ ಸಮೀಪ ಕಾಣಿಸಿಕೊಂಡ 20ಕ್ಕೂ ಹೆಚ್ಚು ಆನೆಗಳು..

ಸಾಂಧಬಿಕ ಚಿತ್ರ
ಸಕಲೇಶಪುರ : ಇಂದು ಬೆಳ್ಳಂಬೆಳಗ್ಗೆ ಸಕಲೇಶಪುರ ಸಮೀಪದ ಕಿರೇಹಳ್ಳಿ ಗ್ರಾಮದ ಸಮೀಪ ಇಪ್ಪತ್ತಕ್ಕೂ ಹೆಚ್ಚು ಆನೆಗಳು ಹಿಂಡುಹಿಂಡಾಗಿ ಕಾಣಿಸಿಕೊಂಡಿದೆ.
ಸಕಲೇಶಪುರದ ಗ್ರಾಮಗಳ ಸಮೀಪದಲ್ಲಿ ಈಗಾಗಲೇ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಇಂದು ಬೆಳಗಿನ ಜಾವ ಈ ಗ್ರಾಮದ ಮುಖ್ಯ ರಸ್ತೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಆನೆಗಳು ತನ್ನ ಮರಿಗಳೊಂದಿಗೆ ರಸ್ತೆ ದಾಟುತ್ತಿದ್ದ ವಂತಹ ವಿಡಿಯೋ ಗಾನ ಭಾಗದಲ್ಲಿ ಸಂಚರಿಸುತ್ತಿದ್ದ ದಾರಿಹೋಕರು ವಿಡಿಯೋ ರೆಕಾರ್ಡ್ ಮಾಡಿದ್ದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಆನೆಗಳಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇದನ್ನು ಒದಿ : https://cnewstv.in/?p=8565
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv