Cnewstv.in / 20.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಯುವಕನ ಬರ್ಬರ ಹತ್ಯೆ, ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್..
ಶಿವಮೊಗ್ಗ : ನಗರದ ಕಾಮತ್ ಪೆಟ್ರೋಲ್ ಬಂಕ್ ಬಳಿ ಟೀ ಕುಡಿಯುತ್ತಿದ್ದ ಯುವಕನ ಮೇಲೆ ಶಿಫ್ಟ್ ಕಾರಿನಲ್ಲಿ ಬಂದ ಗುಂಪೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ.
ಮೃತ ನನ್ನ ಹರ್ಷ (22) ಎಂದು ಗುರುತಿಸಲಾಗಿದ್ದು, ಹೊಟ್ಟೆಯ ಭಾಗಕ್ಕೆ ಚಾಕುವಿನಿಂದ ಕೊಯ್ಯಲಾಗಿದೆ. ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು ನಿಖರವಾದ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
ಕೊಲೆಯಾದ ಹರ್ಷ ಹಿಂದೂಪರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ, ಈ ಹಿನ್ನೆಲೆಯಲ್ಲಿ ಯುವಕನ ಕಡೆಯವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸೀಗೆಹಟ್ಟಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದೆ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವರಿಷ್ಠಾಧಿಕಾರಿಗಳು ಭೇಟಿ ನೀಡಿ ನಾಗರಿಕರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದರು.
ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ನಡೆದಿದ್ದು, ನಗರದಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.
ಇದನ್ನು ಒದಿ : https://cnewstv.in/?p=8572
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments