Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಕೆಲ ಕಾಲ ಪ್ರಕ್ಷುಬ್ಧ ವಾತಾವರಣ : ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಬೆಂಕಿ.
ಶಿವಮೊಗ್ಗ : ಹರ್ಷ ಎಂಬ ಯುವಕನ ಹತ್ಯೆ ಹಿನ್ನಲೆಯಲ್ಲಿ ಶಿವಮೊಗ್ಗ ನಗರದ ಸೀಗೆಹಟ್ಟಿ, ರವಿವರ್ಮ ಬೀದಿಗಳಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು.
ಎರಡು ಗುಂಪುಗಳ ನಡುವೆ ಕಲ್ಲುತೂರಾಟ ನಡೆಯಿತು ತಕ್ಷಣವೇ ಪೊಲೀಸರು ಗುಂಪನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿತ್ತು. ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿ ನಾಗರಿಕರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದರು.
ಸೀಗೆಹಟ್ಟಿಯ ಹಲವೆಡೆ ಮನೆಯ ಮುಂದಿದ್ದ ಬೈಕ್ ಹಾಗೂ ಲಗೇಜ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಮನೆಯ ಮುಂದಿದ್ದ ಕಾರುಗಳನ್ನು ಯುವಕರು ಜಖಂ ಮಾಡಿದ್ದಾರೆ ಎನ್ನಲಾಗುತ್ತಿದೆ.
ಇದನ್ನು ಒದಿ : https://cnewstv.in/?p=8579
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments