Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಸೀಗೆಹಟ್ಟಿಯಲ್ಲಿ ಬೆಂಕಿಗೆ ಆಹುತಿಯಾದ ಮೂರು ಬೈಕ್, ಒಂದು ಟಾಟ ಏಸ್.
ಶಿವಮೊಗ್ಗ : ಹರ್ಷ ಎಂಬ ಯುವಕನ ಹತ್ಯೆ ಹಿನ್ನಲೆಯಲ್ಲಿ ಶಿವಮೊಗ್ಗ ನಗರದ ಸೀಗೆಹಟ್ಟಿ, ರವಿವರ್ಮ ಬೀದಿಗಳಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು.
ಎರಡು ಗುಂಪುಗಳ ನಡುವೆ ಕಲ್ಲುತೂರಾಟ ನಡೆಯಿತು ತಕ್ಷಣವೇ ಪೊಲೀಸರು ಗುಂಪನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು. ಸೀಗೆಹಟ್ಟಿಯಲ್ಲಿ ಮನೆ ಎದುರುಗಡೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿ ಸುತ್ತಿದರೆ ಮತ್ತೊಂದು ಕಡೆ ಗುಂಪುಗಳಿಂದ ಕಲ್ಲುತೂರಾಟ ನಡೆಯುತ್ತಿತ್ತು.
ಒಟ್ಟಿನಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ನಗರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಲಾಗಿತ್ತು.
ಇದನ್ನು ಒದಿ : https://cnewstv.in/?p=8581
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments