Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನಗರದಾದ್ಯಂತ ಗಸ್ತು ಆರಂಭಿಸಿರುವ ಡಿಐಜಿ, ಎಸ್ ಪಿ.
ಶಿವಮೊಗ್ಗ : ದುಷ್ಕರ್ಮಿಗಳು ಬಜರಂಗದಳದ ಕಾರ್ಯಕರ್ತ ಹರ್ಷ ಎಂಬಾತನನ್ನ ಹತ್ಯೆಗೈದಿದ್ದರು. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಸೀಗೆಹಟ್ಟಿ ಭಾಗದಲ್ಲಿ ಕಲ್ಲುತೂರಾಟ ನಡೆದಿತ್ತು. ಮನೆಯ ಮುಂಭಾಗ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಲಾಗುತ್ತಿತ್ತು. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟರು.
ವಿಷಯ ತಿಳಿಯುತ್ತಿದ್ದಂತೆ ಶಿವಮೊಗ್ಗ ನಗರಕ್ಕೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಆಗಮಿಸಿದರು. ಪರಿಸ್ಥಿತಿಯ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ರವರಿಂದ ಮಾಹಿತಿಯನ್ನು ಪಡೆದಿದ್ದಾರೆ. ಬೇರೆ ಜಿಲ್ಲೆಗಳಿಂದ ಹೆಚ್ಚಿನ ಪೊಲೀಸ್ ಫೋರ್ಸ್ ತರಿಸಿಕೊಳ್ಳಲು ಸಾದ್ಯತೆ ಇದೆ.
ಸ್ವತಃ ಡಿಐಜಿ ತ್ಯಾಗರಾಜನ್ ಹಾಗೂ ಎಸ್ಪಿ ಲಕ್ಷ್ಮೀಪ್ರಸಾದ್ ರವರು ನಗರದಾದ್ಯಂತ ಗಸ್ತು ಆರಂಭಿಸಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ನಗರದಾದ್ಯಂತ ಪೋಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.
ಇದನ್ನು ಒದಿ : https://cnewstv.in/?p=8584
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments