Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹರ್ಷ ಕುಟುಂಬಕ್ಕೆ ಸಾಂತ್ವನ ಹೇಳಿದ ಗೃಹಸಚಿವರ ಅರಗ ಜ್ಞಾನೆಂದ್ರ
ಶಿವಮೊಗ್ಗ : ನೆನ್ನೆ ರಾತ್ರಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ಹರ್ಷ ಎಂಬುವನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದರು.
ಇಂದು ಬೆಳಿಗ್ಗೆ ಮೃತ ಹರ್ಷನ ಕುಟುಂಬವನ್ನು ಗೃಹಸಚಿವ ಅರಗ ಜ್ಞಾನೆಂದ್ರ ರವರು ಭೇಟಿಮಾಡಿದರು. ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಹಿಂದೂ ಸಂಘಟನೆಯ ಪ್ರಮಾಣಿಕ ಕಾರ್ಯಕರ್ತನಾಗಿದ್ದ ಹರ್ಷ ಕೊಲೆಯಾದ ಹಿನ್ನೆಲೆಯಲ್ಲಿ ಅನೇಕ ಹಿಂದೂ ಸಂಘಟನೆಯ ಕಾರ್ಯಕರ್ತರು ಶವ ಪರೀಕ್ಷಾ ಕೇಂದ್ರದ ಬಳಿ ಜಮಾಯಿಸಿದ್ದಾರೆ.
ಯಾರು ಏನು ಬೇಕಾದರೂ ಮಾಡಿ ಬಚಾವ್ ಆಗಬಹುದು ಎಂಬ ವಿಕೃತ ಭಾವನೆ ಇನ್ನು ಮುಂದೆ ನಡೆಯೋದಿಲ್ಲ. ಈ ಪ್ರಕರಣದಲ್ಲಿ ಸ್ಪಷ್ಟವಾದ ಮೆಸೇಜ್ ನೀಡುತ್ತೇವೆ ಎಂದು ಹೇಳಿದ್ದಾರೆ.
ಇದನ್ನು ಒದಿ : https://cnewstv.in/?p=8593
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments