Breaking News

ಹರ್ಷ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ… ಮೆರವಣಿಗೆ ಆರಂಭ..

Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಹರ್ಷ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ. ಹರ್ಷ ಮೃತದೇಹ ಮೆರವಣಿಗೆ ಆರಂಭ..

ಶಿವಮೊಗ್ಗ : ನಿನ್ನೆ ರಾತ್ರಿ ಹತ್ಯೆಯಾದ ಹಿಂದೂ ಸಂಘಟನೆ ಕಾರ್ಯಕರ್ತರ ಹರ್ಷ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.‌

ಹರ್ಷ ಮೃತದೇಹವನ್ನ ಮೆರವಣಿಗೆ ಮೂಲಕ ಆತನ ಮನೆಗೆ ಕೊಂಡೊಯ್ಯಲಾಗುತ್ತಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನಲ್ಲಿ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುತ್ತಿದೆ.

ಮೃತದೇಹ ಮೆರವಣಿಗೆಯಲ್ಲಿ ಸಾವಿರಾರು ಹಿಂದೂ ಪರ ಸಂಘಟನೆಯ ಕಾರ್ಯಕರ್ತರು, ಸ್ನೇಹಿತರು ಪಾಲ್ಗೊಂಡಿದ್ದರು. ಬಸ್ ಸ್ಟಾಂಡ್, ಎನ್ ಟಿ ರಸ್ತೆಯ ಮೂಲಕ ಮೆರವಣಿಗೆ ಸಾಗಲಿದೆ. ಸಂಜೆಯವರೆಗೂ ಮನೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು ಸಂಜೆ ವಿದ್ಯಾನಗರದ ರೋಟರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.‌

ಇದನ್ನು ಒದಿ : https://cnewstv.in/?p=8600

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*