Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಹರ್ಷ ಮೃತದೇಹ ಮೆರವಣಿಗೆ ಆರಂಭ : ಸಚಿವ ಕೆ ಎಸ್ ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ ಭಾಗಿ.
ಶಿವಮೊಗ್ಗ : ನೆನ್ನೆ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯಾಗಿತ್ತು. ಇಂದು ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.
ಸಚಿವ ಕೆ.ಎಸ್ ಈಶ್ವರಪ್ಪ ಹಾಗೂ ಸಂಸದ ಬಿ.ವೈ ರಾಘವೇಂದ್ರ ಆಗಮಿಸಿ ಹರ್ಷ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹರ್ಷ ಮೃತದೇಹ ಮೆರವಣಿಗೆಯಲ್ಲಿ ಭಾಗಿಯಾಗಿದ್ದು, ರೋಟರಿ ಚಿತಾಗಾರದವರೆಗೂ ಸಚಿವರು, ಸಂಸದರು ನಡೆದುಕೊಂಡು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ.
ಗಾಂಧಿಬಜಾರ್, ಶಿವಪ್ಪ ನಾಯಕ ಸರ್ಕಲ್, ಬಿ.ಹೆಚ್ ರಸ್ತೆ, ಹೊಳೆ ಬಸ್ ಸ್ಟಾಪ್ ಸೇರಿದಂತೆ ಸುಮಾರು 5 ಕಿಲೋಮೀಟರ್ ವರೆಗೆ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಅನೇಕ ಬಜರಂಗದಳ ಕಾರ್ಯಕರ್ತರು ಸ್ನೇಹಿತರು ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ಸೀಗೆಹಟ್ಟಿಯ ಮನೆಯಿಂದ ಮೆರವಣಿಗೆ ವಿದ್ಯಾನಗರದ ರೋಟರಿ ಚಿತಾಗಾರದ ಕಡೆಗೆ ಸಾಗುತ್ತಿದೆ.
ಇದನ್ನು ಒದಿ : https://cnewstv.in/?p=8618
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments