Cnewstv.in / 21.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಈಗಿನಿಂದ ಬುಧವಾರ ಮುಂಜಾನೆಯ ವರೆಗೂ ನಗರದಲ್ಲಿ ಕರ್ಫ್ಯೂ ಜಾರಿ.
ಶಿವಮೊಗ್ಗ : ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಹಿನ್ನಲೆ ನಗರದಲ್ಲಿ ಗಲಭೆ ಉಂಟಾಗಿದ್ದು, ಶಿವಮೊಗ್ಗ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕರ್ಫ್ಯೂ ವಿಧಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.
ಇಂದು ರಾತ್ರಿಯಿಂದ ಬುಧವಾರ ಬೆಳಗಿನ ಜಾವದವರೆಗೂ ಕರ್ಫ್ಯೂ ವಿಧಿಸಲಾಗಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಅಗತ್ಯವಾಗಿ ಓಡಾಡುವುದನ್ನು ನಿರ್ಬಂಧಿಸಲಾಗಿದೆ. ಜಿಲ್ಲೆಯಲ್ಲಿ ಪೊಲೀಸ್ ಪಡೆಯನ್ನು ಹೆಚ್ಚಿಸಲಾಗಿದೆ.
ಇಂದು ಮಧ್ಯಾಹ್ನ ಶವಯಾತ್ರೆ ಸಮಯದಲ್ಲಿ ಉದ್ವಿಗ್ನ ಗುಂಪು ಅಂಗಡಿಗಳಿಗೆ ವಾಹನಗಳಿಗೆ ಬೆಂಕಿ ಹಚ್ಚಿದರು. ಪೊಲೀಸರು ಗುಂಪುಗಳನ್ನು ನಿಯಂತ್ರಿಸಲು ಹರಸಾಹಸ ಪಟ್ಟರು ಹೀಗಾಗಿ ನಗರದಲ್ಲಿ ಮುಂಜಾಗೃತಾ ಕ್ರಮವಾಗಿ ಕರ್ಫ್ಯೂ ವಿಧಿಸಲಾಗಿದೆ. ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ
ಇದನ್ನು ಒದಿ : https://cnewstv.in/?p=8634
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments