Cnewstv.in / 22.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನಗರದಲ್ಲಿ ಕರ್ಫ್ಯೂ ವಿಸ್ತರಣೆ, ಶಾಲಾ-ಕಾಲೇಜುಗಳಿಗೆ ರಜೆ.
ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈಗಾಗಲೇ ಕರ್ಫ್ಯೂ ವಿಧಿಸಲಾಗಿತ್ತು. ಇನ್ನೆರಡು ದಿನಗಳ ಕಾಲ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ಪಮಣಿ ತಿಳಿಸಿದ್ದಾರೆ.
ಕರ್ಫ್ಯೂ ಅವಧಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು, ನಗರವ್ಯಾಪ್ತಿಯ ಅಗತ್ಯ ವಸ್ತುಗಳ ಖರೀದಿಗಾಗಿ ಬೆಳಗ್ಗೆ 6 ರಿಂದ 9 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ನಗರ ವ್ಯಾಪ್ತಿಯ ಮೂರು ಸೂಕ್ಷ್ಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಲಾ ಠಾಣೆಗಳಲ್ಲಿ ಒಬ್ಬೊಬ್ಬ ಮ್ಯಾಜಿಸ್ಟ್ರೇಟರ್ ನ್ನ ನೇಮಿಸಲಾಗಿದೆ. ಈ ಮ್ಯಾಜಿಸ್ಟ್ರೇಟ್ ಗಳು ಗಲಭೆ ವಿಚಾರಗಳಲ್ಲಿ ಸಂತ್ರಸ್ತ್ರ ಪ್ರಕರಣಗಳನ್ನ ಬಲುಬೇಗ ಇತ್ಯಾರ್ಥ ಮಾಡಲಿದ್ದಾರೆ ಎಂದು ವಿವರಿಸಿದರು.
ದೊಡ್ಡಪೇಟೆ ಕೋಟೆಮತ್ತು ತುಂಗನಗರ ಪೊಲೀಸ್ ಠಾಣ ವ್ಯಾಪ್ತಿಯನ್ನ ಅತಿ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ ಎಂದರು. ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಬಿಗಿ ಪೋಲಿಸ್ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇದನ್ನು ಒದಿ : https://cnewstv.in/?p=8661
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments