Cnewstv.in / 23.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಶಿವಮೊಗ್ಗ ಸ್ತಬ್ಧ : ಮತ್ತೆ ಸಂಕಷ್ಟದಲ್ಲಿ ವ್ಯಾಪಾರಸ್ಥರು..
ಶಿವಮೊಗ್ಗ : ಭಾನುವಾರ ರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷ ಎಂಬಾತನ ಹತ್ಯೆಯ ನಂತರ ಶಿವಮೊಗ್ಗದಲ್ಲಿ ವಾತಾವರಣ ಭುಗಿಲೆದ್ದಿತ್ತು. ವಾಹನಗಳು ಕಚೇರಿಗಳ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ನಂತರ ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ವಿಧಿಸಲಾಯಿತು..
ಹಳೆ ಶಿವಮೊಗ್ಗ ಭಾಗದಲ್ಲಿ ಗಲಾಟೆ ಆರಂಭವಾಗುತ್ತಿದ್ದಂತೆ ಅಂಗಡಿಗಳನ್ನು ಬಂದ್ ಮಾಡಲಾಯಿತು. ನಂತರ ಕರ್ಫ್ಯೂ ವಿಧಿಸಿದ ಕಾರಣ ಶಿವಮೊಗ್ಗದಲ್ಲಿ ಅಂಗಡಿಗಳನ್ನು ಬಂದ್ ಮಾಡಲಾಗಿದೆ.
ಕಳೆದ ಎರಡು ವರ್ಷಗಳಿಂದ ಕೊರೋನಾ ಕರಿನೆರಳಿನಿಂದ ವ್ಯಾಪಾರಸ್ಥರು ಹೈರಾಣಾಗಿದ್ದರು. ಕೊರೊನಾ ಸಂದರ್ಭದಲ್ಲಿ ಆದಂತಹ ನಷ್ಟವನ್ನೇ ಇನ್ನೂ ಸಹ ಬರಿಸಲು ಆಗಿಲ್ಲ. ಕೊರೊನಾ ಅಲೆ ಜಿಲ್ಲೆಯಲ್ಲಿ ಕಡಿಮೆಯಾಗಿದೆ. ಇನ್ನೇನು ಒಂದು ಹಂತಕ್ಕೆ ವ್ಯಾಪಾರವಾಗುತ್ತಿದೆ ಎನ್ನುವಾಗಲೇ ಗಲಭೆಯಾಗಿ ಅಂಗಡಿ ಬಂದ್ ಅಗಿರುವು, ವ್ಯಾಪಾರಸ್ಥರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಇನ್ನು ಕರ್ಫ್ಯು ಅವಧಿಯಲ್ಲಿ ಅಗತ್ಯ ವಸ್ತುಗಳಿಗಾಗಿ ಬೆಳಗ್ಗೆ 6 ರಿಂದ 9 ರವರೆಗೆ ಅವಕಾಶವನ್ನ ಕಲ್ಪಿಸಲಾಗಿದೆ. ಅದರ ಅಗತ್ಯ ಸೇವೆಗಳನ್ನು ಹೊರತುಪಡಿಸಿದಂತೆ ಜವಳಿ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಿಗಳಿಗೆ ಅವಕಾಶವಿಲ್ಲ ಹೀಗಾಗಿ ಅವರು ಮತ್ತೆ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಒಟ್ಟಿನಲ್ಲಿ ಶಿವಮೊಗ್ಗ ನಗರ ಮತ್ತೆ ಸಹಜ ಸ್ಥಿತಿಯತ್ತ ಬರದಿದ್ದರೆ ಮುಂದಿನ ದಿನಗಳಲ್ಲಿ ಮಧ್ಯಮ ವರ್ಗದ ವ್ಯಾಪಾರಸ್ಥರ ಸ್ಥಿತಿ ಹೇಳತೀರ ದಂತಾಗುತ್ತದೆ ಎಂದರೆ ತಪ್ಪಿಲ್ಲ..
-ಚೈತ್ರ ಸಜ್ಜನ್
ಇದನ್ನು ಒದಿ : https://cnewstv.in/?p=8671
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments