Cnewstv.in / 24.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನ್ಯಾಯಾಂಗ ನಿಂದನೆ : ನಟ ಚೇತನ್‌ಗೆ 14 ದಿನಗಳ ನ್ಯಾಯಾಂಗ ಬಂಧನ.
ಬೆಂಗಳೂರು : ನ್ಯಾಯಾಂಗ ನಿಂದನೆಯ ಆರೋಪದ ಮೇಲೆ ನಟ ಚೇತನ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಹಿಜಾಬ್ ಪ್ರಕರಣವನ್ನು ಆಲಿಸುತ್ತಿರುವ ಕರ್ನಾಟಕ ಹೈಕೋರ್ಟ್ನ ಪೂರ್ಣಪೀಠದಲ್ಲಿ ನ್ಯಾಯಮೂರ್ತಿಯಾಗಿರುವ ಕೃಷ್ಣ ಎಸ್. ದೀಕ್ಷಿತ್ ಅವರ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿರುವ ಸಾಮಾಜಿಕ ಹೋರಾಟಗಾರ, ಅ ದಿನಗಳು, ನಟ ಚೇತನ್ ಅವರನ್ನು ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿದೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ಗಳಾದ 505(2) (ಕೋಮುಗಳ ನಡುವೆ ವೈಷಮ್ಯ ಸೃಷ್ಟಿ), 504 (ಉದ್ದೇಶಪೂರ್ವಕವಾಗಿ ಅವಮಾನಿಸಿ, ಆ ಮೂಲಕ ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುವುದು) ಅಡಿ ಶೇಷಾದ್ರಿಪುರಂ ಠಾಣೆಯಲ್ಲಿ ದೂರು ದಾಖಲಿಸಿ, ಪೊಲೀಸರು ಅವರನ್ನು ಮಂಗಳವಾರ ಬಂಧಿಸಿದ್ದರು.
ನಟ ಚೇತನ್ ಅವರ ಜಾಮೀನು ಮನವಿಯ ವಿಚಾರಣೆ ನಡೆಸಿದ 40ನೇ ಹೆಚ್ಚುವರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶರು ಪ್ರಕರಣವನ್ನು ಫೆಬ್ರವರಿ 25ಕ್ಕೆ ಮುಂದೂಡಿದರು.
ಇದನ್ನು ಒದಿ : https://cnewstv.in/?p=8697
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv