Cnewstv.in / 24.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಸ್ವಚ್ಛಭಾರತ ಅಭಿಯಾನ ಭಾರತಕ್ಕೆ ಜಾಗತಿಕ ಮನ್ನಣೆ ತಂದಿದೆ.
ಶಿವಮೊಗ್ಗ : ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಸ್ವಚ್ಛಭಾರತ ಅಭಿಯಾನ ಭಾರತಕ್ಕೆ ಜಾಗತಿಕ ಮನ್ನಣೆ ತಂದಿದೆ. ಯೋಜನೆಯ ಅನುಷ್ಠಾನ ದೇಶದಲ್ಲಿ ಪರಿಣಾಮಕಾರಿಯಾಗಿ ನಡೆಯುತ್ತಿದ್ದು ಯುವ ಜನತೆ ಸರ್ಕಾರದೊಂದಿಗೆ ಕೈಜೋಡಿಸಬೇಕೆಂದು ಭದ್ರಾವತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ ಜಿ ಧನಂಜಯ ಕರೆ ನೀಡಿದರು.
ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಶಿವಮೊಗ್ಗ ಘಟಕ ವತಿಯಿಂದ ಭದ್ರಾವತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಲ ಶಕ್ತಿ ಯೋಜನೆ ಹಾಗೂ ಸ್ವಚ್ಛಭಾರತ ಅಭಿಯಾನ ಸೇರಿದಂತೆ ಕೇಂದ್ರ ಸರಕಾರದ ಹಲವು ಯೋಜನೆಗಳ ಕುರಿತು ಜಾಗೃತಿ ಕಾರ್ಯಕ್ರಮ ಇಂದು ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಾತನಾಡಿದ ಡಾ.ಬಿ ಜಿ ಧನಂಜಯ, ಸ್ವಚ್ಛಭಾರತ ಅಭಿಯಾನ ಹಾಗೂ ಜನಸಹಭಾಗಿತ್ವದ ಬಗ್ಗೆ ಮಾಹಿತಿ ನೀಡಿದರು. ಜಲ ಶಕ್ತಿ ಅಭಿಯಾನದ ಬಗ್ಗೆ ವಿಶೇಷ ಉಪನ್ಯಾಸ ನೀಡಿದ ಸರ್. ಎಂ.ವಿ.ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ವಿಷ್ಣುಮೂರ್ತಿ ಜಲ ಸಂರಕ್ಷಣೆಯ ಕುರಿತು ಮಾಹಿತಿ ನೀಡಿದರು.
ಸಂಗೀತ ಮತ್ತು ನಾಟಕ ವಿಭಾಗದ ಕಲಾ ತಂಡದಿಂದ ಸರ್ಕಾರದ ಯೋಜನೆಗಳ ಜಾಗೃತಿ ಮೂಡಿಸುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕ್ಷೇತ್ರ ಪ್ರಚಾರಾಧಿಕಾರಿ ಶ್ರೀಮತಿ ಅಕ್ಷತಾ ಸಿ. ಹೆಚ್, ಕಾಲೇಜಿನ ಸಾಂಸ್ಕೃತಿಕ ವೇದಿಕೆಯ ಫ್ರೊಫೆಸರ್ ಎಂ.ಮಲ್ಲಪ್ಪ, ಐಕ್ಯೂ ಎ ಸಿ ಸಂಚಾಲಕ ಫ್ರೊಫೆಸರ್ ಬಸವರಾಜಪ್ಪ, ಕಾಲೇಜಿನ ವಿದ್ಯಾರ್ಥಿಗಳು ಭಾಗವಯಿಸಿದ್ದರು, ಕಾರ್ಯಕ್ರಮದ ನಿರೂಪಣೆಯನ್ನ ಕ್ಷೇತ್ರ ಪ್ರಚಾರ ಸಹಾಯಕ ಲಕ್ಷ್ಮೀಕಾಂತ ಸಿ ವಿ ನಡೆಸಿಕೊಟ್ಟರು.
ಇದನ್ನು ಒದಿ : https://cnewstv.in/?p=8703
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments