Cnewstv.in / 24.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಉಕ್ರೇನ್ – ರಷ್ಯಾ ಯುದ್ದ : ವಿದ್ಯಾಭ್ಯಾಸಕ್ಕೆಂದು ತೆರಳಿದ ಜಿಲ್ಲೆಯ ಮೂವರೂ ವಿದ್ಯಾರ್ಥಿಗಳು ಹೇಗಿದ್ದಾರೆ ??
ಶಿವಮೊಗ್ಗ : ಉಕ್ರೇನ್ – ರಷ್ಯಾ ಯುದ್ಧ ಆರಂಭವಾಗಿದೆ. ಶಿವಮೊಗ್ಗ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸವನ್ನು ಉಕ್ರೇನ್ ನಲ್ಲಿ ಮಾಡುತ್ತಿದ್ದಾರೆ. ಈ ಬಗ್ಗೆ ಆತಂಕ ಗೊಳಗಾದ ಪೋಷಕರು ಇಂದು ಗೃಹಸಚಿವರ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ತಮ್ಮ ಮಕ್ಕಳನ್ನು ಸುರಕ್ಷಿತವಾಗಿ ಕರೆಸಿ ಕೊಡುವಂತೆ ಮನವಿ ಸಲ್ಲಿಸಿದರು.
ಶಿವಮೊಗ್ಗ ನಗರದ ಸಂತೆ ಕಡೂರಿನ ತೇಜಸ್ ಉಕ್ರೇನ್ ನಲ್ಲಿ MBBS ವ್ಯಾಸಂಗ ಮಾಡುತ್ತಿದ್ದಾರೆ. ಮಲ್ಲಿಗೆನ ಹಳ್ಳಿ ಗ್ರಾಮದ ಗಾನಶ್ರೀ ಎಂಬುವವರು MDವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಯುದ್ಧ ಆರಂಭವಾಗುತ್ತಿದ್ದಂತೆ ಇವರೆಲ್ಲರೂ ತಮ್ಮ ಪೋಷಕರೊಂದಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿ ಸುರಕ್ಷಿತವಾಗಿರುವುದು ತಿಳಿಸಿದ್ದಾರೆ.
ರಾಯಭಾರಿ ಕಚೇರಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ವಿಮಾನಯಾನ ಸೇವೆ ಆರಂಭವಾದ ಕೂಡಲೇ ಅವರೆಲ್ಲರನ್ನೂ ಸುರಕ್ಷಿತವಾಗಿ ಹಿಂದಕ್ಕೆ ಕರೆಸಿಕೊಳ್ಳುತ್ತಿವೆ ಎಂಬ ಭರವಸೆಯನ್ನು ಸಚಿವರ ಜ್ಞಾನೇಂದ್ರ ಅವರು ವಿದ್ಯಾರ್ಥಿಗಳ ಪೋಷಕರಿಗೆ ನೀಡಿದ್ದಾರೆ. ಜಿಲ್ಲೆಯ ಇನ್ನಷ್ಟು ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬಹುದು ಎಂದು ಹೇಳಲಾಗುತ್ತಿದೆ. ಇದರ ಬಗ್ಗೆ ಸರ್ಕಾರ ಮಾಹಿತಿ ಪಡೆದುಕೊಳ್ಳುತ್ತಿದೆ ಎಂದರು.
ಇದನ್ನು ಒದಿ : https://cnewstv.in/?p=8709
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments