Breaking News

ಶಿವಮೊಗ್ಗ ಶಾಂತ, ನಾಳೆ ಕರ್ಫ್ಯೂ ಅಂತ್ಯ..

Cnewstv.in / 25.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗ ಶಾಂತ, ನಾಳೆ ಕರ್ಫ್ಯೂ ಅಂತ್ಯ..

ಶಿವಮೊಗ್ಗ : ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯಿಂದ ಶಿವಮೊಗ್ಗ ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.‌ ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರಾದ್ಯಂತ ಕರ್ಫ್ಯೂ ವಿಧಿಸಲಾಗಿತ್ತು. ಶಾಲಾ ಕಾಲೇಜುಗಳಿಗೆ ರಜೆ ವಿಧಿಸಲಾಗಿತ್ತು.

ಶಿವಮೊಗ್ಗ ಎಂದಿನಂತೆ ಸಹಜ ಸ್ಥಿತಿಗೆ ಮರಳಿದ್ದು, ನಾಳೆ ಕರ್ಫ್ಯೂ ಮುಗಿಯಲಿದೆ. ಆದರೂ ಸಹ ನಗರಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್ ಅನ್ನು ಮಾಡಿದ್ದಾರೆ. ನಾಳೆಯಿಂದ ಶಾಲಾ-ಕಾಲೇಜುಗಳು ಪುನರಾರಂಭಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಾಮಣಿ ತಿಳಿಸಿದ್ದಾರೆ. ವ್ಯಾಪಾರ ವಹಿವಾಟುಗಳು ಕೂಡ ಆರಂಭವಾಗಲಿದೆ.

ಕೆಲದಿನಗಳಿಂದ ನಗರದಲ್ಲಿ ಯಾವುದೇ ರೀತಿಯಾದಂತಹ ಘಟನೆಗಳು ವರದಿಯಾಗಿಲ್ಲ. ಪರಿಸ್ಥಿತಿ ಪೊಲೀಸರ ನಿಯಂತ್ರಣದಲ್ಲಿದೆ.‌ ಹಳೆ ಶಿವಮೊಗ್ಗ ಭಾಗ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇದನ್ನು ಒದಿ : https://cnewstv.in/?p=8714

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*