Breaking News

ನಗರದಲ್ಲಿ ಕರ್ಫ್ಯೂ ಅವಧಿ ಸಡಿಲಿಕೆ : ನಾಳೆ ಕೂಡ ಶಾಲಾ ಕಾಲೇಜುಗಳಿಗೆ ರಜೆ..

Cnewstv.in / 25.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ನಗರದಲ್ಲಿ ಕರ್ಫ್ಯೂ ಅವಧಿ ಸಡಿಲಿಕೆ : ನಾಳೆ ಕೂಡ ಶಾಲಾ ಕಾಲೇಜುಗಳಿಗೆ ರಜೆ.

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಕರ್ಪ್ಯೂ ಅವಧಿಯಲ್ಲಿ ಸಡಿಲಿಕೆ ಮಾಡಲಾಗಿದ್ದು, ಫೆಬ್ರವರಿ 26 ಶನಿವಾರ ಬೆಳಿಗ್ಗೆ 6ರಿಂದ ಸಂಜೆ 4ಗಂಟೆವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ.
.
ಶಿವಮೊಗ್ಗ ನಗರದಲ್ಲಿ ಶನಿವಾರ ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಸೋಮವಾರದಿಂದ ಶಾಲಾ ಕಾಲೇಜು ಪುನರಾರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ಕೋರಿದ್ದಾರೆ.

ಇದನ್ನು ಒದಿ : https://cnewstv.in/?p=8720

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*