Cnewstv.in / 25.02.2022 / ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
KRS ಬೃಂದಾವನದಲ್ಲಿ ಪ್ರತ್ಯಕ್ಷವಾದ ಚಿರತೆ..!!
ಶ್ರೀರಂಗಪಟ್ಟಣ : ಸುಪ್ರಸಿದ್ಧ KRS ಬೃಂದಾವನದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ತಾತ್ಕಾಲಿಕವಾಗಿ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
KRS ಉತ್ತರ ಬೃಂದಾವನದಲ್ಲಿ ಗಸ್ತಿನಲ್ಲಿದ್ದ ಪೊಲೀಸರಿಗೆ ಚಿರತೆ ಕಂಡುಬಂದಿದೆ. ತಕ್ಷಣವೇ ಅವರು ಅರಣ್ಯ ಇಲಾಖೆಗೆ ಹಾಗೂ ಕಾವೇರಿ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣವೇ ಸ್ಥಳಕ್ಕೆ ಬಂದ ಅಧಿಕಾರಿಗಳು ಪ್ರವಾಸಿಗರನ್ನು ರಕ್ಷಿಸಲು ಮುಂದಾಗಿದ್ದಾರೆ. ತಾತ್ಕಾಲಿಕವಾಗಿ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಹಾಗೂ ಚಿರತೆಯನ್ನು ಹಿಡಿಯುವ ಪ್ರಯತ್ನದಲ್ಲಿದ್ದಾರೆ
ಇದನ್ನು ಒದಿ : https://cnewstv.in/?p=8724
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv