Breaking News

ಹರ್ಷ ಕುಟುಂಬಸ್ಥರನ್ನು ಭೇಟಿಯಾದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್.

Cnewstv.in / 26.02.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಹರ್ಷ ಕುಟುಂಬಸ್ಥರನ್ನು ಭೇಟಿಯಾದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್.

ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಸ್ಥರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಭೇಟಿ ಮಾಡಿ ಸಾಂತ್ವನ ಹೇಳಲಾಯಿತು.

ಸಾಲುಸಾಲಾಗಿ ಬಿಜೆಪಿ ಮುಖಂಡರು ಹರ್ಷ ನಿವಾಸಕ್ಕೆ ಭೇಟಿ ನೀಡುತ್ತಿದ್ದರು, ಇಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಹರ್ಷ‌ ಮನೆಗೆ ಭೇಟಿ ನೀಡಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.‌

ಹರ್ಷ ಹತ್ಯೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಕೊಡುವಂತೆ ನಮ್ಮ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೂಚಿಸಿದ್ದಾರೆ. ನಾವು ಕೂಡ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಕುಟುಂಬ ಬಯಸಿದಲ್ಲಿ ನಾವು ಯಾವುದೇ ಸಹಾಯವನ್ನು ಮಾಡಲು ಸಿದ್ಧರಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್, ಬೇಲೂರು ಗೋಪಾಲಕೃಷ್ಣ, ಮಾಜಿ MLC ಆರ್ ಪ್ರಸನ್ನ ಕುಮಾರ್, ಯುವ ಕಾಂಗ್ರೆಸ್ ಮುಖಂಡ ರಂಗನಾಥ್ ಕೆ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ ಗಿರೀಶ್, ರಾಜ್ಯ ಕಾರ್ಯದರ್ಶಿ ಪ್ರವೀಣ್, ಚೇತನ್ ಕೆ, ರಮೇಶ್ ಹಾಗೂ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು

ಇದನ್ನು ಒದಿ : https://cnewstv.in/?p=8739

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*