Cnewstv.in / 01.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಶಿವರಾತ್ರಿ ಸಂಭ್ರಮ : ಬೆಳಿಗ್ಗಿನಿಂದಲೇ ದೇವಸ್ಥಾನಗಳಲ್ಲಿ ವಿಶೇಷ ಪೂಜೆ.
ಶಿವಮೊಗ್ಗ : ಕೈಲಾಸವಾಸಿ ಶಿವನಿಗೆ ಅತ್ಯಂತ ಪ್ರಿಯವಾದ ದಿನ ಶಿವರಾತ್ರಿ. ಪ್ರತಿ ಸಂವತ್ಸರದಲ್ಲಿ ಶಿಶಿರ ಋತುವಿನ ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಶಿವರಾತ್ರಿಯನ್ನು ಆಚರಿಸಲಾಗುತ್ತದೆ. ಶಿವರಾತ್ರಿ ಸಮಯವು ಪೂಜೆಗೆ ಬಹು ಪ್ರಶಸ್ತ್ಯವಾದ ಸಮಯ.
ಇಂದು ನಗರದ ಶಿವಾಲಯಗಳಲ್ಲಿ ಬೆಳಗ್ಗಿನಿಂದಲೇ ವಿಶೇಷ ಪೂಜೆಗಳನ್ನು ಸಲ್ಲಿಸಲಾಗುತ್ತಿದೆ. ಶಿವನಿಗೆ ಪ್ರಿಯವಾದ ಬಿಲ್ಪತ್ರೆ ಯನ್ನ ಅರ್ಪಿಸಿ ವಿಶೇಷವಾಗಿ ಅಲಂಕಾರ ಮಾಡಲಾಗಿದೆ. ಭಕ್ತರು ಶ್ರದ್ಧಾ ಭಕ್ತಿಯಿಂದ ದೇವಸ್ಥಾನಗಳಿಗೆ ತೆರಳಿ ನಮಸ್ಕರಿಸುತ್ತಿದ್ದಾರೆ.
ವಿನೋಬನಗರದ ಶಿವಾಲಯದಲ್ಲಿ ಬೆಳಗ್ಗೆ 5 ಗಂಟೆಯಿಂದಲೇ ವಿಶೇಷ ಪೂಜೆಗಳನ್ನು ಮಾಡಲಾಗಿತು. ನಗರದ ಅನೇಕ ಶಿವಾಲಯದಲ್ಲಿ ಭಕ್ತರು ಬೆಳಗಿನಿಂದಲೇ ದೇವರ ದರ್ಶನಕ್ಕಾಗಿ ನಿಂತಿದ್ದಾರೆ. ಬಂದಂತಹ ಭಕ್ತಾದಿಗಳಿಗೆ ಕೋಸಂಬರಿ ಪಾನಕ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.
ಇದನ್ನು ಒದಿ : https://cnewstv.in/?p=8775
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399




ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv