Breaking News

ಶಿವಾರಾತ್ರಿ ಆಚರಣೆ ಕುರಿತು ಶಿವಪುರಾಣದಲ್ಲಿ ಇರುವ ಕಥೆ ಗೊತ್ತಾ ??

Cnewstv.in / ವಿಶೇಷ ಅಂಕಣ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಾರಾತ್ರಿ ಆಚರಣೆ ಕುರಿತು ಶಿವಪುರಾಣದಲ್ಲಿ ಇರುವ ಕಥೆ ಗೊತ್ತಾ ??

ದೇವಲೋಕದಲ್ಲಿ ಒಮ್ಮೆ ಬ್ರಹ್ಮ ಹಾಗೂ ವಿಷ್ಣುವಿನ ನಡುವೆ ಯಾರು ಶ್ರೇಷ್ಠರು ಎಂಬ ವಿಷಯಕ್ಕೆ ವಾಗ್ವಾದಗಳು ನಡೆಯುತ್ತಿದ್ದವು. ಮಹಾ ದೇವತೆಗಳಿಬ್ಬರನ್ನೂ ಸಮಾಧಾನ ಮಾಡುವುದು ದುರ್ಲಭ ಎನಿಸಿದಾಗ, ದೇವತೆಗಳೆಲ್ಲ ಹೋಗಿ ಪರಶಿವನನ್ನು ಬೇಡಿಕೊಳ್ಳುತ್ತಾರೆ. ವಿಷ್ಣು ಹಾಗೂ ಬ್ರಹ್ಮರ ಜಗಳವನ್ನು ಶಮನ ಮಾಡುವಂತೆ ಕೋರಿಕೊಳ್ಳುತ್ತಾರೆ. ಆಗ ವಿಷ್ಣು ಮತ್ತು ಬ್ರಹ್ಮರ ನಡುವೆ ಶಿವ, ಅಗ್ನಿಕಂಭದ ರೂಪದಲ್ಲಿ ಬಂದು ನಿಂತು ತನ್ನ ಮೂಲವನ್ನು ಕಂಡುಹಿಡಿಯಲು ಸೂಚಿಸುತ್ತಾನೆ.

ಆಗ ಹಂಸದ ರೂಪ ತಾಳಿದ ಬ್ರಹ್ಮ ಅಗ್ನಿ ಕಂಭದ ಶಿರವನ್ನು ಹುಡುಕಲು ಮೇಲ್ಮುಖವಾಗಿ ಹೊರಡುತ್ತಾನೆ. ವಿಷ್ಣು ವರಾಹವತಾರ ತಾಳಿ ಕಂಭದ ತಳವನ್ನು ನೋಡುವುದಕ್ಕಾಗಿ ಪಾತಾಳಕ್ಕೆ ಇಳಿಯುತ್ತಾನೆ. ಎಷ್ಟೇ ಮುಂದೆ ಸಾಗಿದರೂ ಬ್ರಹ್ಮ ಹಾಗೂ ವಿಷ್ಣು ಇವರಿಬ್ಬರಿಗೂ ಕಂಭದ ಅಂತ್ಯವೇ ಕಾಣುವುದಿಲ್ಲ. ಅನಂತವಾಗಿರುವ ಶಿವನ ಶಕ್ತಿಯನ್ನು ನೋಡಿದ ವಿಷ್ಣು ಹಾಗೂ ಬ್ರಹ್ಮರಿಗೆ ಸತ್ಯದ ಅರಿವಾಗುತ್ತದೆ. ಆದರೆ ಶಿವನ ಜಡೆಯಿಂದ ಕೆಳಗೆ ಬೀಳುತ್ತಿದ್ದ ಕೇತಕಿ ಪುಷ್ಫದ ಬಳಿ ಬ್ರಹ್ಮ , ನೀನು ಎಲ್ಲಿಂದ ಬೀಳುತ್ತಿದ್ದೀಯ ಎಂದು ಪ್ರಶ್ನಿಸುತ್ತಾನೆ.

ಆಗ ಆ ಪುಷ್ಪವು ನಾನು ಅಗ್ನಿ ಕಂಭದ ಶಿರದಿಂದ ಬೀಳುತ್ತಿದ್ದೇನೆ ಎಂಬ ಉತ್ತರ ನೀಡುತ್ತದೆ. ಆಗ ಬ್ರಹ್ಮ ಶಿವನಲ್ಲಿಗೆ ಬಂದು ಕೇತಕಿ ಪುಪ್ಪವನ್ನು ತೋರಿಸಿ, ತಾನು ಅಗ್ನಿ ಕಂಭದ ಶಿರಭಾಗವನ್ನು ನೋಡಿರುವುದಾಗಿಯೂ ಅಲ್ಲಿಂದಲೇ ಕೇತಕಿ ಪುಷ್ಪವನ್ನು ತಂದಿರುವುದಾಗಿಯೂ ಹೇಳುತ್ತಾನೆ. ಇವರಿಬ್ಬರ ಮೋಸವನ್ನು ಅರಿತ ಶಿವ, ಬ್ರಹ್ಮನನ್ನು ಯಾರೂ ಪೂಜಿಸಕೂಡದು ಎಂದು ಶಾಪ ನೀಡಿ ಲಿಂಗರೂಪ ತಾಳುತ್ತಾನೆ. ಅಂದು ಮಾಘ ಮಾಸದ ಬಹುಳ ಚತುರ್ದಶಿಯಾಗಿರುತ್ತದೆ. ಹೀಗಾಗಿ, ಶಿವ ಲಿಂಗರೂಪ ತಾಳಿದ ಮಾಘ ಮಾಸದ ಬಹುಳ ಚತುರ್ದಶಿಯಂದು ಶಿವರಾತ್ರಿಯನ್ನು ಆಚರಿಸಲಾಗುತ್ತದೆ.

ಇದನ್ನು ಒದಿ : https://cnewstv.in/?p=8784

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*