Cnewstv.in / 01.03.2022 / ಉಕ್ರೇನ್/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ರಷ್ಯಾ – ಉಕ್ರೇನ್ ಯುದ್ಧ : ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಸಾವು.
ಉಕ್ರೇನ್ : ಖಾರ್ಕಿವ್ ನಗರದಲ್ಲಿ ಇಂದು ಬೆಳಗ್ಗೆ ರಷ್ಯಾ ಪಡೆ ನಡೆಸಿದ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ್ದಾರೆ.
ಖಾರ್ಕಿವ್ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾನಿಲಯದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ನವೀನ್ ಮೂಲತಃ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದವರು.
ಇಂದು ಬೆಳೆಗೆ ಮೆಟ್ರೋ ನಿಲ್ದಾಣದ ಬಂಕರ್ ನಿಂದ ದಿನಸಿ ವಸ್ತುಗಳನ್ನು ತರಲು ನವೀನ್ ಹೊರಗೆ ಹೋಗಿದ್ದಾರೆ. ಅಲ್ಲಿ ಶೆಲ್ ದಾಳಿಯಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ನವೀನ್ ಸಾವನ್ನಪ್ಪಿದ ವಿಷಯವನ್ನು ಅವನ ಸ್ನೇಹಿತ ಇಂದು ಬೆಳಿಗ್ಗೆ ಕುಟುಂಬಸ್ಥರಿಗೆ ತಿಳಿಸಿದ್ದಾರೆ.
ಖಾರ್ಕಿವ್‌ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬರು ಶೆಲ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಸಾವನ್ನು ದೃಢಪಡಿಸಿದ್ದಾರೆ. ಸದ್ಯ ನವೀನ್ ಮೃತದೇಹವನ್ನು ಖಾರ್ಕಿವ್ ನಗರದ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.
ಇದನ್ನು ಒದಿ : https://cnewstv.in/?p=8794
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv