Breaking News

ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಪ್ರಧಾನಿ ಮೋದಿ 2 ನೇ ಬಾರಿ ಮಾತುಕತೆ. ‌

Cnewstv.in / 03.03.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಪ್ರಧಾನಿ ಮೋದಿ 2 ನೇ ಬಾರಿ ಮಾತುಕತೆ. ‌

ನವದೆಹಲಿ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ನೆನ್ನೆ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರು ದೂರವಾಣಿಯಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ರಷ್ಯಾ – ಉಕ್ರೇನ್ ನಡುವೆ ಯುದ್ಧ ಆರಂಭವಾದಾಗಿನಿಂದ ಇದು ಎರಡನೇ ಬಾರಿ ಮೋದಿಯವರು ರಷ್ಯಾ ಅಧ್ಯಕ್ಷ ಜೊತೆಯಲ್ಲಿ ಸಂಭಾಷಣೆ ನಡೆಸಿದ್ದಾರೆ.

ರಷ್ಯಾ ಭೀಕರ ದಾಳಿಗೆ ತುತ್ತಾಗಿರುವ ಉಕ್ರೇನ್ ನಾ ಪ್ರಮುಖ ನಗರಗಳಲ್ಲಿ ಖಾರ್ಕಿವ್‌ ಕೂಡ ಒಂದು. ಖಾರ್ಕಿವ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಿಲುಕಿಕೊಂಡಿದ್ದಾರೆ.

ವಿದ್ಯಾರ್ಥಿಗಳ ಸುರಕ್ಷತೆಗೆ ಒತ್ತು ನೀಡಬೇಕು ಹಾಗೂ ಅವರನ್ನು ಅಲ್ಲಿಂದ ತೆರವುಗೊಳಿಸಲು ಭಾರತ ನಡೆಸುತ್ತಿರುವ ಪ್ರಯತ್ನಗಳಿಗೆ ರಷ್ಯಾ ಸಹಕಾರ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನು ಒದಿ : https://cnewstv.in/?p=8811

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*