Breaking News

ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ.

Cnewstv.in / 03.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ.

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ನೇಮಕ ಮಾಡಲು ಅರ್ಹ ನ್ಯಾಯವಾದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗೆ ಆಯ್ಕೆ ಬಯಸುವ ಅಭ್ಯರ್ಥಿ 07 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅನುಭವ ಹೊಂದಿರಬೇಕು. ಹಾಗೂ ವೈಯಕ್ತಿಕ ಮಾಹಿತಿಯೊಂದಿಗೆ(ಹೆಸರು, ವಯಸ್ಸು, ಹುಟ್ಟಿದ ದಿನಾಂಕ, ವಿದ್ಯಾರ್ಹತೆ, ನ್ಯಾಯವಾದಿಯಾಗಿ ನೋಂದಣಿ ಆಗಿರುವ ಬಗ್ಗೆ ನೋಂದಣಿ ಸಂಖ್ಯೆಯೊಂದಿಗೆ ವಿವರ, ಇತ್ಯಾದಿ) ಅರ್ಜಿ ಸಿದ್ದಪಡಿಸಿ ಮಾರ್ಚ್ 23 ರ ಸಂಜೆ 05 ಗಂಟೆಯೊಳಗೆ ಜಿಲ್ಲಾಧಿಕಾರಿಗಳ ನ್ಯಾಯಾಂಗ ಶಾಖೆಯಲ್ಲಿ ಅರ್ಜಿ ಸಲ್ಲಿಸತಕ್ಕದ್ದು.

ಹೆಚ್ಚಿನ ಮಾಹಿತಿಯನ್ನು ಕಚೇರಿಯ ಸಮಯದಲ್ಲಿ ನ್ಯಾಯಾಂಗ ಶಾಖೆ ಹಾಗೂ ದೂರವಾಣಿ ಸಂಖ್ಯೆ: 08182-221100/221010 ಲ್ಲಿ ಪಡೆಯಬಹುದು ಎಂದು ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್ ಹೊನ್ನಳ್ಳಿ ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=8838

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*