Cnewstv.in / 07.03.2022 / ಲಕ್ನೊ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಉತ್ತರ ಪ್ರದೇಶ ಚುನಾವಣೆ : ಕೊನೆಯ ಹಂತದ ಮತದಾನ.
ಲಕ್ನೊ : ಉತ್ತರ ಪ್ರದೇಶ ವಿಧಾನಸಭೆಗೆ ಕೊನೆಯ 7ನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ.
ಉತ್ತರ ಪ್ರದೇಶದ ವಾರಾಣಸಿ ಸೇರಿದಂತೆ ಒಂಭತ್ತು ಜಿಲ್ಲೆಗಳ 54 ಕ್ಷೇತ್ರಗಳಲ್ಲಿ ಏಳನೇಯ ಮತ್ತು ಕೊನೇ ಹಂತದ ಮತದಾನ ಸೋಮವಾರ ನಡೆಯಲಿದೆ. ಮಾ.10ರಂದು ಮತ ಎಣಿಕೆ ನಡೆಯಲಿದೆ. ಈ ಐದು ರಾಜ್ಯಗಳ, ವಿಶೇಷವಾಗಿ ಉತ್ತರ ಪ್ರದೇಶದಲ್ಲಿ ಯಾವ ಪಕ್ಷ ಅಥವಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎನ್ನುವುದು 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ.
ಬೆಳಗ್ಗೆ 7 ಗಂಟೆ ಯಿಂದ ಸಂಜೆ ಆರು ಗಂಟೆಯ ವರೆಗೆ ಮತದಾನದ ಸಮಯ ನಿಗದಿ ಮಾಡಲಾಗಿದೆ. ಪಂಜಾಬ್, ಗೋವಾ, ಉತ್ತರಾಖಂಡಗಳಲ್ಲಿ ಒಂದೇ ಹಂತದ ಮತ ದಾನ ನಡೆದಿತ್ತು. ಮಣಿಪುರದಲ್ಲಿ ಎರಡು ಹಂತಗಳ ಮತದಾನ ನಡೆದಿತ್ತು.
ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ ಅಧ್ಯಕ್ಷ ಓಂ ಪ್ರಕಾಶ್ ರಾಜ್‌ಭರ್ ಮತ್ತು ಹಲವು ರಾಜ್ಯ ಸಚಿವರ ಭವಿಷ್ಯ ಈ ಸುತ್ತಿನಲ್ಲಿ ನಿರ್ಧಾರವಾಗಲಿದೆ. ಇಂದು 2.06 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ.
ಚಾಕಿಯಾ (ಚಂದೌಲಿ), ರಾಬರ್ಟ್ಸ್‌ಗಂಜ್ ಮತ್ತು ದುದ್ಧಿ (ಸೋನ್‌ಭದ್ರ) ಸ್ಥಾನಗಳಲ್ಲಿ ಬೆಳಿಗ್ಗೆ 7 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದ್ದು, ಉಳಿದ ಕ್ಷೇತ್ರಗಳಲ್ಲಿ ಇದು ಸಂಜೆ 6 ರವರೆಗೆ ಮುಂದುವರಿಯುತ್ತದೆ.
ಇದನ್ನು ಒದಿ : https://cnewstv.in/?p=8872
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments