Cnewstv.in / 09.03.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ವಿಧಾನಪರಿಷತ್ ಸದಸ್ಯ D.S. ಅರುಣ್ ಗೆ ಬೆದರಿಕೆ ಕರೆ.
ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯರಾದ ಡಿ ಎಸ್ ಅವರಿಗೆ ಬೆದರಿಕೆ ಕರೆ ಬಂದಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೆ. 21ರಂದು D.S ಅರುಣ್ ರವರಿಗೆ ಬೆದರಿಕೆ ಕರೆ ಬಂದಿದೆ. ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ತಕ್ ಅಲಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶವನ್ನು ಪ್ರಕಟಿಸಿದ್ದಾರೆ ಎಂದು ಹೇಳಲಾಗಿದೆ.
“ನಿನ್ನ ತಲೆಲಿ ಇವತ್ತು ಕೇವಲ ಒಬ್ಬ ಹಿಂದೂ ಕಾರ್ಯಕರ್ತ ಸತ್ತಿದ್ದಾನೆ ಅಷ್ಟೇ, ಆದರೆ ಮುಂದಿನ ದಿನ ನಿನ್ನ ಹೆಂಡತಿ ಮಕ್ಕಳು ನಮ್ಮ ಟಾರ್ಗೆಟ್ ನೆನಪಿಡಿ, ಷಂಡ ಸರ್ಕಾರದ ಭಂಡರಂತೆ ವರ್ತಿಸುವ ಪ್ರಚಂಡರೆ ” ಇಂದು ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ರಕ್ಷಣಾ ಅಧಿಕಾರಿಗಳಿಗೆ ದೂರು ನೀಡಲಾಗಿದ್ದು, CEN ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಗೂ ಸೂಕ್ತ ಭದ್ರತೆ ಒದಗಿಸುವಂತೆ ಮನವಿ ಮಾಡಲಾಗಿದೆ.
ಇದನ್ನು ಒದಿ : https://cnewstv.in/?p=8903
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv